HomeKarnatakaಕೇಂದ್ರ ಬಜೆಟ್ ನಲ್ಲಿ ತಾರತಮ್ಯ; ಕರ್ನಾಟಕಕ್ಕೆ ನೆರವು ನೀಡದ ವಿತ್ತ ಸಚಿವರು; ವಿಪಕ್ಷಗಳ ಸರ್ಕಾರವಿರುವ ರಾಜ್ಯಗಳ...

ಕೇಂದ್ರ ಬಜೆಟ್ ನಲ್ಲಿ ತಾರತಮ್ಯ; ಕರ್ನಾಟಕಕ್ಕೆ ನೆರವು ನೀಡದ ವಿತ್ತ ಸಚಿವರು; ವಿಪಕ್ಷಗಳ ಸರ್ಕಾರವಿರುವ ರಾಜ್ಯಗಳ ಕಡೆಗಣನೆ: ಡಿಸಿಎಂ ಆಕ್ರೋಶ

ಬೆಂಗಳೂರು: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ನಿರಾಶಾದಾಯವಾಗಿದೆ. ಬಿಜೆಪಿ, ಎನ್ ಡಿಎ ಮೈತ್ರಿ ಸರ್ಕಾರ ಇರುವ ರಾಜ್ಯಗಳಿಗೆ ಮಾತ್ರ ಕೊಡುಗೆಗಳನ್ನು ನೀಡಿದ್ದಾರೆ. ಬೇರೆ ರಾಜ್ಯಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಬಜೆಟ್ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಎನ್ ಡಿಎ ಸರ್ಕಾರ ಉಳಿಸಿಕೊಳ್ಳಲು ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಇದಾಗಿದೆ. ಕರ್ನಾಟಕಕ್ಕೆ ಯಾವುದೇ ನೆರವು ನೀಡದೆ ಅವರ ಮೇಲಿದ್ದ ನಿರೀಕ್ಷೆಗಳನ್ನು ಹುಸಿ ಮಾಡಿದ್ದಾರೆ ಎಂದರು.

ಬಿಹಾರ ಹಾಗೂ ಆಂಧ್ರ ಪ್ರದೇಶಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ. ನಮ್ಮ ರಾಜ್ಯಕ್ಕೆ ಯಾವುದೇ ನೆರವು ಇಲ್ಲ. ಈ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ದೇಶವನ್ನು ಒಂದಾಗಿ ನೋಡಿಲ್ಲ. ಇಂಡಿಯಾ ಮೈತ್ರಿಕೂಟದ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳನ್ನು ಕಡೆಗಣಿಸಿದ್ದಾರೆ. ಇದು ಕೇವಲ ಬಿಜೆಪಿ ಹಾಗೂ ಎನ್ ಡಿಎ ಮೈತ್ರಿಕೂಟ ಪಕ್ಷಗಳ ಆಡಳಿತ ರಾಜ್ಯಗಳಿಗೆ ನೆರವು ನೀಡುವ ಬಜೆಟ್ ಆಗಿದೆ. ಈ ಬಜೆಟ್ ನಲ್ಲಿ ತಾರತಮ್ಯ ಹೆಚ್ಚಾಗಿದೆ. ಇದು ಖಂಡನೀಯ ಎಂದು ಕಿಡಿಕಾರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಧಾನಮಂತ್ರಿ ಹಾಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮೇಲೆ ನಾನು ಬಹಳಷ್ಟು ವಿಶ್ವಾಸ ಇಟ್ಟುಕೊಂಡಿದ್ದೆ. ಇಡೀ ವಿಶ್ವ ಭಾರತವನ್ನು ಬೆಂಗಳೂರಿನ ಮೂಲಕ ನೋಡುತ್ತಿದೆ. ಬೆಂಗಳೂರು ಹಾಗೂ ಕರ್ನಾಟಕ ಹೆಚ್ಚು ಉದ್ಯೋಗಗಳನ್ನು ಸೃಷ್ಟಿ ಮಾಡಿ ಜಾಗತಿಕ ಮಟ್ಟದಲ್ಲಿ ತನ್ನದೇ ಚಾಪು ಮೂಡಿಸಿದೆ. ಹೀಗಾಗಿ ಪ್ರಧಾನಮಂತ್ರಿಗಳು ಬೆಂಗಳೂರಿಗೆ ಮೂಲಸೌಕರ್ಯ ನೆರವು ಹಾಗೂ ಕರ್ನಾಟಕಕ್ಕೆ ಸಹಾಯ ಮಾಡುವ ಭರವಸೆ ಇಟ್ಟುಕೊಂಡಿದ್ದೆ. ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕವನ್ನು ಪ್ರತಿನಿಧಿಸಿದ್ದಾರೆ. ಆದರೂ ತಮ್ಮ ರಾಜ್ಯಕ್ಕೆ ಆದ್ಯತೆ ನೀಡಿಲ್ಲ. ರಾಜ್ಯದಲಿ ಬಾಕಿ ಇರುವ ಯೋಜನೆಗಳಿಗೆ ಯಾವುದೇ ಅನುದಾನ ನೀಡಿಲ್ಲ. ನಮ್ಮ ನಿರೀಕ್ಷೆಗಳು ಹುಸಿಯಾಗಿವೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular