HomeLatest NewsBIG NEWS: ಪವರ್ ಶೇರಿಂಗ್ ವಿಚಾರ ಚರ್ಚೆ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

BIG NEWS: ಪವರ್ ಶೇರಿಂಗ್ ವಿಚಾರ ಚರ್ಚೆ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ದಿಢೀರ್ ಭೇಟಿಯಾದ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಯಾವುದೇ ಪವರ್ ಶೇರಿಂಗ್ ಬಗ್ಗೆ ಚರ್ಚೆಯಾಗಿಲ್ಲ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹಸಚಿವರು ಮಧ್ಯರಾತ್ರಿ ತಮ್ಮನ್ನು ಭೇಟಿ ಮಾಡಿದ ವಿಚಾರವಾಗಿ, ಪರಮೇಶ್ವರ್ ಅವರು ಬಂದು ಭೇಟಿಯಾಗಿದ್ದು ನಿಜ. ಆದರೆ ಬೇರೆ ವಿಚಾರ ಚರ್ಚೆ ಮಾಡಿದೆವು. ಪವರ್ ಶೇರಿಂಗ್ ವಿಚಾರ ಚರ್ಚೆಯಾಗಿಲ್ಲ. ಇಲ್ಲಿ ಪವರ್ ಶೇರಿಂಗ್ ವಿಚಾರ ಚರ್ಚೆ ಇಲ್ಲ. ನಾವೆಲ್ಲರೂ ಸೇರಿ ಒಟ್ಟಾಗಿ ಶಿಸ್ತಿನಿಂದ ಕೆಲಸ ಮಾಡಬೇಕು. ಇದರ ಹೊರತಾಗಿ ಬೇರೆ ಯಾವುದೇ ವಿಚಾರವಿಲ್ಲ ಎಂದು ಸ್ಪಷ್ಟಪಡಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular