HomeLatest Newsಅಧಿವೇಶನ ಕರೆದಿರುವುದೇ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು: ಮಹದಾಯಿ, ಕೃಷ್ಣಾ, ಭದ್ರಾ ಮೇಲ್ದಂಡೆ ಯೋಜನೆ...

ಅಧಿವೇಶನ ಕರೆದಿರುವುದೇ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು: ಮಹದಾಯಿ, ಕೃಷ್ಣಾ, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ ಯಾಕೆ? ಡಿ.ಕೆ.ಶಿವಕುಮಾರ್ ಪ್ರಶ್ನೆ

ಬೆಳಗಾವಿ: ನಾವು ಅಧಿವೇಶನ ಕರೆದಿರುವುದೇ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು. ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ ಯಾಕೆ? ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ಉತ್ತರ ಕರ್ನಾಟಕ ಭಾಗದ ನೀರಾವರಿ ಯೋಜನೆಗಳ ಬಗ್ಗೆ ಕೇಲುತ್ತಿಲ್ಲ ಯಾಕೆ? ಎಂದರು.

ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ನಮಗೆ ಬದ್ಧತೆ ಇದೆ. ಕೇಂದ್ರ ಸರ್ಕಾರ ಜಿಎಸ್ ಟಿ ಪರಿಷ್ಕರಣೆ ಮೂಲಕ ರಾಜ್ಯದ ಆದಾಯ ಕಡಿಮೆ ಮಾಡಿದೆ. ವಾರ್ಷಿಕ 10-15 ಸಾವಿರ ಕೋಟಿ ಕೊರತೆಯಾಗಿದೆ. ನಾವು ಕೊಟ್ಟ ಮಾತಿಗೆ ಬದ್ಧವಾಗಿದ್ದೇವೆ. ಒಂದೆರಡು ತಿಂಗಳು ಹೆಚ್ಚು ಕಮ್ಮಿಯಾಗಲಿದೆ. ಬಿಜೆಪಿಯವರು ಬೇರೆ ರಾಜ್ಯಗಳಲ್ಲಿ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಿ. ಕೇಂದ್ರ ಸರ್ಕಾರ ರಾಜ್ಯದ ನೀರಾವರಿ ಯೋಜನೆಗೆ ಘೋಷಿಸಿದ ಅನುದಾನ ಇಲ್ಲಿಯವರೆಗೂ ಕೊಟ್ಟಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ನೀಡಿಲ್ಲ, ಮಹದಾಯಿ ವಿಚಾರವಾಗಿ ಅನುಮತಿ ನೀಡಿಲ್ಲ, ಬಿಜೆಪಿ ಯಾಕೆ ಈ ಬಗ್ಗೆ ಮಾತನಾಡುತ್ತಿಲ್ಲ? ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಸೂಚನೆ ಹೊರಡಿಸಿಲ್ಲ. ಇವುಗಳ ಬಗ್ಗೆ ಯಾಕೆ ಅವರು ಮಾತನಾಡುತ್ತಿಲ್ಲ? ಎಂದು ಪ್ರಶ್ನಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದ್ವೇಷ ಭಾಷಣ ನಿಷೇಧ ಕಾಯ್ದೆ ಬಗ್ಗೆ ನಮ್ಮದು ನಾಗರಿಕ ಸಮಾಜ. ಇಲ್ಲಿ ದ್ವೇಷ ಮಾಡಬಾರದು. ದ್ವೇಷ, ಗಲಾಟೆ ಮೂಲಕ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡಬಾರದು ಎಂಬ ದೃಷ್ಟಿಯಿಂದ ಕಾನೂನು ತರಲಾಗುತ್ತಿದೆ. ಇದರಿಂದ ರಾಜ್ಯ ಹಾಗೂ ಸಮಾಜಕ್ಕೆ ಒಳ್ಳೆಯದಾಗಲಿದೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular