HomeKarnatakaBIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಬಿಜೆಪಿ ಶಾಸಕ ಹೆಬ್ಬಾರ್, ಎಸ್.ಟಿ,ಸೋಮಶೇಖರ್

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಬಿಜೆಪಿ ಶಾಸಕ ಹೆಬ್ಬಾರ್, ಎಸ್.ಟಿ,ಸೋಮಶೇಖರ್

ಬೆಂಗಳೂರು: ವಿಧಾನಸಭಾ ಚುನಾವಣೆ ಬಳಿಕ ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದು, ಕಾಂಗ್ರೆಸ್ ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿಯೂ ಇಬ್ಬರು ನಾಯಕರು ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸದೇ ದೂರ ಉಳಿದಿದ್ದಾರೆ, ಎಸ್.ಟಿ.ಸೋಮಶೇಖರ್ ಬಿಜೆಪಿ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ನಾಯಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಎಲ್ಲಾ ಬೆಳವಣಿಗಳ ನಡುವೆ ಇಬ್ಬರು ಬಿಜೆಪಿ ಶಾಸಕರಾದ ಶಿವರಾಮ್ ಹೆಬ್ಬಾರ್ ಹಾಗೂ ಎಸ್.ಟಿ.ಸೋಮಶೇಖರ್ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸಕ್ಕೆ ಆಗಮಿಸಿದ ಶಾಸಕರು, ಡಿ.ಕೆ.ಶಿವಕುಮಾರ್ ಜೊತೆ ಸಮಾಲೋಚನೆ ನಡೆಸಿದ್ದು, ಇನ್ನಷ್ಟು ಕುತೂಹಲ ಮೂಡಿದೆ.

 

For Latest News Updates, Join Our Whatsapp Community🚩
RELATED ARTICLES

Most Popular