ಚಿಕ್ಕಬಳ್ಳಾಪುರ: ನಾಯಕತ್ವ ಬದಲಾವಣೆ ವಿಚಾರವಾಗಿ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆ. ಅವರ ತೀರ್ಮಾನಕ್ಕೆ ಬದ್ಧ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಹೈಕಮಾಂಡ್ ನನ್ನನ್ನೇ ಮುಂದುವರೆಯುವಂತೆ ಹೇಳಿದರೆ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ. ಏನೇ ಇದ್ದರೂ ಹೈಕಮಾಂಡ್ ನಿರ್ಧಾರವೇ ಅಂತಿಮ. ಅವರು ಹೇಳಿದ್ದಕ್ಕೆ ನಾನಾಗಲಿ, ಡಿಸಿಎಂ ಡಿ.ಕೆ.ಶಿವಕುಮಾರ್ ಆಗಲಿ ಒಪ್ಪಲೇಬೇಕು ಎಂದು ಹೇಳಿದ್ದರು. ಸಿಎಂ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಸಿಎಂ ಹೇಳಿದ ಮೇಲೆ ಅದೇ ವೇದ ವಾಕ್ಯ ಎಂದು ಹೇಳಿದ್ದಾರೆ. ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ ಎಂದು ತಿಳಿಸಿದ್ದಾರೆ.
