HomeLatest NewsBREAKING : ಕರ್ನಾಟಕದ 'CM' ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ : ಕನ್ನಡದಲ್ಲೇ...

BREAKING : ಕರ್ನಾಟಕದ ‘CM’ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ : ಕನ್ನಡದಲ್ಲೇ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

ಬೆಂಗಳೂರು : ಕರ್ನಾಟಕದ 25 ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ್ದು, ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಭ ಹಾರೈಸಿದ್ದಾರೆ.

ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲು ದಾಖಲಾಗಿದ್ದು, ಹಿರಿಯ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರು ಇಂದು (ಜೂನ್ 3, 2026) ರಾಜ್ಯದ 34ನೇ ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಸಂಜೆ ಬೆಂಗಳೂರಿನ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ನೂತನ ಮುಖ್ಯಮಂತ್ರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು. ಇದರೊಂದಿಗೆ ಕಳೆದ ವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಯೊಂದಿಗೆ ಆರಂಭವಾಗಿದ್ದ ಸುಗಮ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ.

ಪ್ರಧಾನಿ ಮೋದಿಯವರ ಸಂದೇಶ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿರುವ ಪ್ರಧಾನಿ ಮೋದಿ, ” ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿಗೆ ಶುಭಾಶಯಗಳು. ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ ಜನರ ಕಲ್ಯಾಣಕ್ಕಾಗಿ ನಿಕಟವಾಗಿ ಕಾರ್ಯನಿರ್ವಹಿಸಲಿದೆ. ಎಂದು ತಮ್ಮ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಧಾನಿಯವರ ಈ ಹೇಳಿಕೆಯು ರಾಜ್ಯ ಮತ್ತು ಕೇಂದ್ರದ ನಡುವಿನ ಉತ್ತಮ ಸಮನ್ವಯಕ್ಕೆ ಭರವಸೆಯನ್ನು ನೀಡಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಪೂರಕವಾಗಿರಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಕೇಂದ್ರ ಸರ್ಕಾರದ ಸಹಕಾರದೊಂದಿಗೆ ರಾಜ್ಯದ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಈ ಹೊಸ ಬಾಂಧವ್ಯ ವೇದಿಕೆಯಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿರುವ ಹೊಸ ಮುಖ್ಯಮಂತ್ರಿಗೆ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ನಾಯಕರಿಂದಲೂ ಶುಭಾಶಯಗಳ ಮಹಾಪೂರ ಹರಿದುಬರುತ್ತಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular