HomeLatest NewsBIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ಟನಲ್ ರಸ್ತೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.

ಬೆಂಗಳೂರಿನ ಸದಾಶಿವ ನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನುವಾಸಕ್ಕೆ ಆಗಮಿಸಿದ ಸಂಸದ ತೇಜಸ್ವಿ ಸೂರ್ಯ, ಡಿಸಿಎಂ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಸುರಂಗ ರಸ್ತೆ ಸಾಧಕ-ಬಾಧಕಗಳ ಬಗ್ಗೆ ಸಮಾಲೋಚನೆ ನಡೆಸಿದರು. ಈ ವೇಳೆ ಟ್ಯಾಬ್ ಮೂಲಕವಾಗಿ ಸಂಸದರು ಸುರಂಗ ರಸ್ತೆಯಿಂದಾಗುವ ಸಮಸ್ಯೆ ಬಗ್ಗೆ ತಮ್ಮ ಆಕ್ಷೇಪದ ಬಗ್ಗೆ ವಿವರಿಸಿದರು.

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸುರಂಗ ರಸ್ತೆ ನಿರ್ಮಾಣಕ್ಕೆ ಮುಂದಾಗಿದೆ. ಈ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಸಂಸದ ತೇಜಸ್ವಿ ಸೂರ್ಯ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್ ಸಂಸದ ತೇಜಸ್ವಿ ಸೂರ್ಯ ಅವರಿಗೆ ತಮ್ಮನ್ನು ಭೇಟಿಯಾಗಿ ಚರ್ಚೆ ನಡೆಸುವಂತೆ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಸಂಸದರು ಇಂದು ಡಿಸಿಎಂ ಭೇಟಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular