HomeLatest NewsBIG NEWS: 'ಕಲೆಕ್ಷನ್ ಕಿಂಗ್' ವಿಜಯೇಂದ್ರ; ತಪ್ಪಿಸಿಕೊಂಡು ಓಡಾಡದೆ ಅಸೆಂಬ್ಲಿಯಲ್ಲಿ ಮಾತನಾಡಲಿ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

BIG NEWS: ‘ಕಲೆಕ್ಷನ್ ಕಿಂಗ್’ ವಿಜಯೇಂದ್ರ; ತಪ್ಪಿಸಿಕೊಂಡು ಓಡಾಡದೆ ಅಸೆಂಬ್ಲಿಯಲ್ಲಿ ಮಾತನಾಡಲಿ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಬೆಳಗಾವಿ: ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ. ಭ್ರಷ್ಟಾಚಾರ ಹೆಚ್ಚುತ್ತಿದೆ ಎಂದು ಆರೋಪಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಕಲೆಕ್ಷನ್ ಕಿಂಗ್ ಎಂದು ಏನಾದರೂ ಇದ್ದರೆ ಅದು ವಿಜಯೇಂದ್ರ. ಅವರ ತಂದೆ ಹೆಸರು ಇಳಿಯಲು ವಿಜಯೇಂದ್ರ ಕಾರಣ. ಇದನ್ನ ಮರೆಯಬಾರದು ಎಂದು ಗುಡುಗಿದ್ದಾರೆ.

ಬೆಳಗಾವಿಯ ಸುವರ್ಣ ಸೌಧದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಯಾವ ಖಜಾನೆ ಖಾಲಿಯಾಗಿದೆ? ಕಲೆಕ್ಷನ್, ಅವರ ಅಕೌಂಟ್ ಗಳು, ವಹಿವಾಟುಗಳನ್ನು ಬಿಚ್ಚಿಡಬೇಕೆ? ವಿಜಯೇಂದ್ರ ಕಲೆಕ್ಷನ್ ಕಿಂಗ್ ಎಂದು ಕಿಡಿಕಾರಿದರು.

ವಿಜಯೇಂದ್ರ ಅವರಿಗೆ ಅನುಭವವಿಲ್ಲ. ಯಾವ ಖಜಾನೆ ಖಾಲಿಯಾಗಿದೆ? ಎಂದು ಅವರು ವಿಧಾನಸಭೆಯಲ್ಲಿ ಮಾತನಾಡಲಿ. ನಾವೂ ಉತ್ತರ ಕೊಡುತೇವೆ. ಒಂದು ಪಕ್ಷದ ಅಧ್ಯಕ್ಷರಾಗಿ ಇತಿಮಿತಿಯಿಂದ ಮಾತನಾಡಲಿ. ಮೊದಲು ವಿಧಾನಸಭೆಗೆ ಬಂದು ಮಾತನಾಡಲು ಹೇಳಿ. ತಪ್ಪಿಸಿಕೊಂಡು ಹೋಗಿ ಎಲ್ಲೋ ಇರುವುದಲ್ಲ. ಇಲ್ಲಿ ಬಂದು ಮಾತನಾಡಲಿ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರ ಹಾಗೂ ಸಕ್ಕರೆ ಕಾರ್ಖಾನೆಗಳಿಗೆ ಹೊರೆಯಾಗುತ್ತಿದ್ದರು ನಮ್ಮ ಸರ್ಕಾರ ರೈತರ ಪರವಾಗಿ ತೀರ್ಮಾನ ತೆಗೆದುಕೊಂಡಿದ್ದೇವೆ. ಕಬ್ಬು, ಮೆಕ್ಕೆಜೋಳದ ಬೆಲೆಗಳ ಬಗ್ಗೆ ಇದ್ದ ಸಮಸ್ಯೆಗಳನ್ನು ನಾವು ಬಗೆಹರಿಸಿದ್ದೇವೆ. ಸರ್ಕಾರ ರೈತಪರವಾಗಿ ತೆಗೆದುಕೊಂಡಿರುವ ನಿರ್ಧಾರವನ್ನು ರೈತರು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

ಮುಖ್ಯಮಂತ್ರಿಯವರು ಹಾಗೂ ಕಂದಾಯ ಸಚಿವರು ಉತ್ತರ ಕರ್ನಾಟಕದ ವಿಚಾರವಾಗಿ ನಡೆದಿರುವ ಚರ್ಚೆಗಳಿಗೆ ಉತ್ತರ ನೀಡುತ್ತಾರೆ. ಈ ಭಾಗದ ನೀರಾವರಿ ಯೋಜನೆಗಳಾದ ಯುಕೆಪಿ, ಮಹದಾಯಿ ವಿಚಾರಗಳ ಬಗ್ಗೆ ಅವಕಾಶ ಸಿಕ್ಕರೆ ಉತ್ತರಿಸುತ್ತೇನೆ ಎಂದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular