HomeKarnatakaBIG NEWS: ಕಸ ವಿಲೇವಾರಿಗೆ ವಿರೋಧ ಮಾಡುವವರ ಕ್ಷೇತ್ರದಲ್ಲಿ ಕಸವನ್ನೇ ತೆಗೆಸುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ

BIG NEWS: ಕಸ ವಿಲೇವಾರಿಗೆ ವಿರೋಧ ಮಾಡುವವರ ಕ್ಷೇತ್ರದಲ್ಲಿ ಕಸವನ್ನೇ ತೆಗೆಸುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ

ಬೆಂಗಳೂರು: ಬಿಜೆಪಿ ನಾಯಕರುಗಳು ಕಸ ವಿಲೇವಾರಿಗೆ ಬಿಡುವುದು ಬೇಡ‌. ಅವರೇ ಕಸವನ್ನು ಇಟ್ಟುಕೊಳ್ಳಲಿ. ಯಾರು ಬಿಡುವುದಿಲ್ಲವೋ ಅವರ ಕ್ಷೇತ್ರದಲ್ಲಿ ಕಸವನ್ನೇ ತೆಗೆಯುವುದಿಲ್ಲ, ತೆಗೆಸುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಅಸ್ಸಾಂಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಕಸ ವಿಲೇವಾರಿಗೆ ಬಿಡದವರ ಕ್ಷೇತ್ರದಲ್ಲಿ ಕಸ ತೆಗೆಸುವುದುಲ್ಲ. ಆಗ ಜನರೇ ಅವರಿಗೆ ಉಗಿಯುತ್ತಾರೆ. ಮೈಕ್ ಹಾಕಿ ಪ್ರಚಾರ ಮಾಡಿಸುತ್ತೇನೆ. ಕಾಲನ್ನು ಕಟ್ಟಿಕೊಳ್ಳಲು ಆಗುತ್ತದೆಯೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಸ ವಿಲೇವಾರಿಗೆ ಬಿಡುವುದಿಲ್ಲ ಎನ್ನುವ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕಿಡಿಕಾರಿದ ಡಿಸಿಎಂ, ಕಸವನ್ನು ಎಲ್ಲಾದರೂ ಒಂದು ಕಡೆ ಹಾಕಬೇಕಲ್ಲವೇ? ಕಸ ಯಾರದ್ದು ಅದು ಜನರ ಕಸ. ಮೊದಲಿನಿಂದಲೂ ಹೇಗೆ ಸಂಪ್ರದಾಯವಿತ್ತೋ ಅದೇ ರೀತಿ ಮಾಡಿಕೊಂಡು ಬರುತ್ತಿದ್ದೇವೆ. ಬಿಜೆಪಿ ಹಾಗೂ ನಮ್ಮ ಸಮಯದಲ್ಲಿ ತೀರ್ಮಾನ ಮಾಡಿದ್ದು ಇದೇ ರೀತಿ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾವು ಅಭಿವೃದ್ಧಿಗೆ ಹಣ ಕೊಟ್ಟಿದ್ದೇವೆ. ಸಾವಿರಾರು ಕೋಟಿಯನ್ನು ಎಷ್ಟು ಎಂದು ಕೊಡಲು ಆಗುತ್ತದೆ. 20, 30 ಕೋಟಿ ಸೇರಿದಂತೆ 50- 100 ಕೋಟಿ ಹಣವನ್ನು ಅಭಿವೃದ್ಧಿಗೆ ಕೊಡುತ್ತಾ ಬಂದಿದ್ದೇವೆ. ನಾವು ಕೊಡುತ್ತೇವೆ. ಅವರು ಅರ್ಥ ಮಾಡಿಕೊಳ್ಳಬೇಕು. ಮಹದೇವಪುರದಲ್ಲಿ ಕಸ ವಿಲೇವಾರಿ ನಿಲ್ಲಿಸಲಾಗಿದೆ. ನಾವು ಸಹ ಅಲ್ಲಿನ ಕಸ ಮೂರು ದಿನ ತೆಗೆಯಬೇಡಿ ಎಂದರೆ ಏನಾಗಬಹುದು ಎಂದರು.

ಕಸ ವಿಲೇವಾರಿಗೆ ನಾಲ್ಕು ಕಡೆ ಜಮೀನುಗಳನ್ನು ನೋಡಿದ್ದೆವು. ಭೂಮಿ ಸಮಸ್ಯೆ ಬಂದ ಕಾರಣಕ್ಕೆ ಎರಡು ಕಡೆ ಅಂತಿಮ‌ ಮಾಡಿದ್ದೇವೆ. ಟೆಂಡರ್ ಕೂಡ ಕರೆಯಲಾಗಿದೆ. ನಮ್ಮ ಕೆಲಸವನ್ನು ನಾವು ಮಾಡುತ್ತಿದ್ದೇವೆ ಎಂದರು‌.

ಇದೇ ವೇಳೆ ಸಾರಿಗೆ ನೌಕರರ ಮುಷ್ಕರದ ವಿಚಾರವಾಗಿ ಮಾತನಾಡಿದ ಡಿ.ಕೆ.ಶಿವಕುಮಾರ್, ಸಾರಿಗೆ ನೌಕರರು ಇಷ್ಟು ಕೊಟ್ಟಿರುವುದಕ್ಕೆ ಸಂತೋಷ ಪಡಬೇಕು. ಸರ್ಕಾರದ ಪರಿಸ್ಥಿತಿಯನ್ನು ಅವರು ಅರ್ಥ ಮಾಡಿಕೊಳ್ಳಬೇಕು. ದಯವಿಟ್ಟು ಸಾರಿಗೆ ನೌಕರರು ಸಹಕಾರ ನೀಡಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular