HomeLatest NewsBIG NEWS: ನನ್ನ ಹುಟ್ಟುಹಬ್ಬಕ್ಕೆ ಫ್ಲೆಕ್ಸ್, ಬ್ಯಾನರ್ ಹಾಕಬೇಡಿ; ಫ್ಲೆಕ್ಸ್ ಹಾಕಿದರೆ ದುಬಾರಿ ದಂಡದ ಎಚ್ಚರಿಕೆ...

BIG NEWS: ನನ್ನ ಹುಟ್ಟುಹಬ್ಬಕ್ಕೆ ಫ್ಲೆಕ್ಸ್, ಬ್ಯಾನರ್ ಹಾಕಬೇಡಿ; ಫ್ಲೆಕ್ಸ್ ಹಾಕಿದರೆ ದುಬಾರಿ ದಂಡದ ಎಚ್ಚರಿಕೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನನ್ನ ಜನ್ಮದಿನದಂದು ಯಾರೂ ಫ್ಲೆಕ್ಸ್, ಬ್ಯಾನರ್ ಗಳನ್ನು ಅಳವಡಿಸಬೇಡಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಬಲಿಗರಿಗೆ ಹಾಗೂ ಅಬಿಮಾನಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಮೇ 15 ರಂದು ಹುಟ್ಟುಹಬ್ಬಕ್ಕೆ ಶುಭ ಸುದ್ದಿ ಸಿಗುತ್ತಾ? ಎಂಬ ಸುದ್ದಿಗಾರರ ಪ್ರಶ್ನೆಗಳಿಗೆ, ನನ್ನ ಜನ್ಮದಿನದಂದು ಯಾರೂ ಫ್ಲೆಕ್ಸ್ ಹಾಗೂ ಬ್ಯಾನರ್ ಗಳನ್ನು ಹಾಕುವಂತಿಲ್ಲ. ಹಾಕಿದರೆ ಅವರ ವಿರುದ್ಧ ಪಾಲಿಕೆ ವತಿಯಿಂದ ಕ್ರಮ ಜರುಗಿಸಲು ಸೂಚಿಸುತ್ತೇನೆ ಎಂದರು.

ಅವಶ್ಯಕತೆ ಇದ್ದಲ್ಲಿ ಹಣ ಪಾವತಿಸಿ ಜಾಹೀರಾತು ಕೊಡಬಹುದು. ರಸ್ತೆಯಲ್ಲಿ ಫ್ಲೆಕ್ಸ್ ಹಾಕಿ ರಸ್ತೆಯ ಸೌಂದರ್ಯ ಹಾಳು ಮಾಡಬಾರದು. ಇದು ನಾನು ಎಲ್ಲರಿಗೂ ಕೊಡುತ್ತಿರುವ ಸೂಚನೆ. ಅನಧಿಕೃತವಾಗಿ ರಸ್ತೆಯಲ್ಲಿ ಫ್ಲೆಕ್ಸ್ ಹಾಕಿದರೆ ದುಬಾರಿ ದಂಡ ವಿಧಿಸಿ ಎಂದು ಆಯುಕ್ತರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಶುಭ ಸುದ್ದಿ ವಿಚಾರವಾಗಿ ಯಾವಾಗ ಏನು ಆಗಬೇಕೋ ಅದು ಆಗುತ್ತದೆ. ಇನ್ನು ಮುಂದೆ ರಾಜಕೀಯ ವಿಚಾರವಾಗಿ ನಾನು ಮಾಧ್ಯಮಗಳ ಮುಂದೆ ಮಾತನಾಡುವುದಿಲ್ಲ. ಸಮಯ ಬಂದಾಗ ತಾನಾಗಿಯೇ ಗೊತ್ತಾಗುತ್ತದೆ ಎಂದು ಹೇಳಿದರು.

ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ. ಯಾವ ರಾಜಕೀಯವೂ ಇಲ್ಲ. ಏನೇನೂ ತೀರ್ಮಾನ ಆಗಿವೆಯೋ ಅವು ಚಾಲ್ತಿಗೆ ಬರಲಿವೆ ಎಂದು ಸ್ಪಷ್ಟಪಡಿಸಿದರು. ನಮ್ಮ ಪಾರ್ಟಿಯಲ್ಲಿ ಯಾವ ಸಮಯದಲ್ಲಿ ಏನು ಮಾಡಬೇಕೋ ಅದನ್ನು ಪಕ್ಷ ಮಾಡುತ್ತದೆ. ನಮಗೆ ನಮ್ಮ ಪಕ್ಷದ ಮೇಲೆ ವಿಶ್ವಾಸ ಇದೆ. ಏನು ಮಾಡಬೇಕು ಎಂಬುದು ಅವರಿಗೆ ಗೊತ್ತಿದೆ ಎಂದು ತಿಳಿಸಿದರು.

ನಾಯಕತ್ವ ಬದಲಾವಣೆ ವಿಚಾರದ ಬಗ್ಗೆ ನಿಮಗೆ ಗೊಂದಲ ಇರಬಹುದು. ನಾನು ಈ ಬಗ್ಗೆ ಯಾವತ್ತು ಚರ್ಚೆ ಮಾಡಲ್ಲ. ಹೈಕಮಾಂಡ್ ಯಾವಾಗ ಯಾವ ಸೂಚನೆ ನೀಡುತ್ತದೆಯೋ ಆವಾಗ ಅದನ್ನು ಪಾಲಿಸುತ್ತೇವೆ ಎಂದು ನಾನು ಹಾಗೂ ಸಿಎಂ ಅವರು ಹೇಳಿದ್ದು, ಅದರಂತೆ ನಡೆಯುತ್ತೇವೆ ಎಂದು ತಿಳಿಸಿದರು.

ಇನ್ನು ಒಳಮೀಸಲಾತಿ ವಿಚಾರವಾಗಿ ಬಿಜೆಪಿ ಟೀಕೆ ಬಗ್ಗೆ , ಬಿಜೆಪಿಯವರ ಕೈಯಲ್ಲಿ ಏನೂ ಮಾಡಲು ಆಗಿಲ್ಲ. ನಾವೇನು ಮಾತು ಕೊಟ್ಟಿದೆವೋ ಆ ಮಾತಿನ ಪ್ರಕಾರ ನಡೆದಿದ್ದೇವೆ. ಹಿಂದೆ 17% ಇದ್ದಾಗಲೂ ಕೂಡ ನಾವು ಸರಿಯಾಗಿಯೇ ಮಾಡಿದ್ದೆವು. ಈಗಲೂ ಕೂಡ ಬಹಳ ಸರಳವಾಗಿ ಮಾಡಿದ್ದೇವೆ. ಬಲ ಹಾಗೂ ಎಡ ಪಂಗಡಗಳಲ್ಲಿ ಮೊದಲು ಯಾರಿಗೆ, ನಂತರ ಯಾರಿಗೆ ಎಂಬ ಪ್ರಶ್ನೆ ಇತ್ತು. ಅದಕ್ಕೆ ಬೇಕಾದ ಪರಿಹಾರ ದಾರಿ ಕಂಡು ಹಿಡಿಯಲಾಗಿದೆ. ಬಲವಿರಲಿ, ಎಡವಿರಲಿ, ಲಂಬಾಣಿ ಇರಲಿ, ಬೋವಿ ಇರಲಿ ಎಲ್ಲರಿಗೂ ನ್ಯಾಯ ಒದಗಿಸುವ ಕೆಲಸವನ್ನು ನಮ್ಮ ಸರಕಾರ ಮಾಡಿದೆ. 30- 40 ವರ್ಷಗಳಿಂದ ಇದ್ದಂತಹ ಸಮಸ್ಯೆಯನ್ನು ನಾವು ಈಡೇರಿಸಿದ್ದೇವೆ. ಎಲ್ಲರಿಗೂ ನ್ಯಾಯ ಕೊಡುತ್ತಿದ್ದೇವೆ ಎಲ್ಲರೂ ಒಟ್ಟಾಗಿ ಹೋಗಬೇಕು ಅಷ್ಟೇ ಎಂದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular