HomeLatest Newsರಾಜ್ಯದಲ್ಲಿ ಕೊತ್ವಾಲ್ ಶಿಷ್ಯನ ಆಡಳಿತ ಎಂದ ಬಿಜೆಪಿ ನಾಯಕರು: ಅವರ ಖುಷಿಗೆ ಏನು ಬೇಕಾದರೂ ಮಾತನಾಡಿಕೊಳ್ಳಲಿ...

ರಾಜ್ಯದಲ್ಲಿ ಕೊತ್ವಾಲ್ ಶಿಷ್ಯನ ಆಡಳಿತ ಎಂದ ಬಿಜೆಪಿ ನಾಯಕರು: ಅವರ ಖುಷಿಗೆ ಏನು ಬೇಕಾದರೂ ಮಾತನಾಡಿಕೊಳ್ಳಲಿ ಎಂದು ತಿರುಗೇಟು ನೀಡಿದ ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಶಾಸಕ ಬಿ.ಪಿ.ಹರೀಶ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದ ಘಟನೆ ಖಂಡಿಸಿ ಬಿಜೆಪಿ ನಾಯಕರು, ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಗೂಂಡಾಗಳಂತೆ ವರ್ತಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ವಿಧಾನಸೌಧ ಗಾಂಧಿ ಪ್ರತಿಮೆ ಬಳಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿ, ಕಾಂಗ್ರೆಸ್ ಕಾರ್ಯ್ಕರ್ತರ ನಡೆ ಖಂಡಿಸಿದರು. ಕಾಂಗ್ರೆಸ್ ಸರ್ಕಾರ ಗೂಂದಾ ರಾಜ್ಯ ಮಾಡಲು ಹೊರಟಿದೆ. ರಾಜ್ಯದಲ್ಲಿರುವುದು ಕೊತ್ವಾಲ್ ಶಿಷ್ಯನ ಆಡಳಿತ ಎಂದು ಕಿಡಿಕಾರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ಶಾಸಕನ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಮೊಟ್ಟೆ ಎಸೆತ ಹಾಗೂ ಕೊತ್ವಾಲ್ ಶಿಷ್ಯನ ಆಡಳಿತ ಎಂಬ ಬಿಜೆಪಿ ನಾಯಕರ ಆರೋಪಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮೊಟ್ಟೆ ಎಸೆದಿದ್ದು ಸರಿಯಲ್ಲ ಎಂದರು.

ನಾವೂ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ ಮಾಡಿದ್ದೇವೆ. ಮಂಗಳವಾರದಂದು ಕಾಂಗ್ರೆಸ್ ಕಚೇರಿ ಬಳಿ ಮೊಟ್ಟೆ ಹೊಡೆದಿದ್ದನ್ನು ಸರಿ ಎಂದು ಹೇಳುವುದಿಲ್ಲ. ಕಾನೂನಿನ ಪ್ರಕಾರ ಯಾವ ಕ್ರಮ ತೆಗೆದುಕೊಳ್ಳಲಾಗುವುದು ಎಂದು ನಮ್ಮ ಗೃಹಸಚಿವರು ಈಗಾಗಲೇ ತಿಳಿಸಿದ್ದಾರೆ ಎಂದರು.

ಬಿಜೆಪಿಯವರು ಹಿಂದೆ ಏನೇನು ಮಾಡಿದ್ದರು ಎಂದು ಅವರೂ ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಲಾಠಿ, ಮಚ್ಚು, ರೈಫಲ್ ಗಳು ಸಿಕ್ಕಿದ್ದವು. ಪೊನ್ನಂಪೇಟೆಯ ಶಾಲೆಯ ಆವರಣದಲ್ಲಿ ರೈಫಲ್ ತರಬೇತಿ ನೀಡಿದ್ದರು. ನಿಮ್ಮದೂ ಇತಿಹಾಸಗಳಿವೆ ಎಂದು ಟಾಂಗ್ ನೀಡಿದರು.

ರಾಜ್ಯದಲ್ಲಿ ಕೊತ್ವಾಲ್ ಶಿಷ್ಯನ ಆಡಳಿತ ನಡೆಯುತ್ತಿದೆ ಎನ್ನುವ ಬಿಜೆಪಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಡಿ.ಕೆ.ಶಿವಕುಮಾರ್, ಅವರ ಖುಷಿಗೆ ಏನು ಬೇಕಾದರೂ, ಹೆಂಗೆ ಬೇಕಾದರೂ ಮಾತನಾಡಿಕೊಳ್ಳಲಿ. ನಾನು ಈ ಸ್ಥಾನಕ್ಕೆ ಬರಲು ವಿದ್ಯಾರ್ಥಿ ನಾಯಕನಾಗಿ ಬೆಳೆದವನು. ಹಳ್ಳಿಯಲ್ಲಿ ಹುಟ್ಟಿದ ನಾನು ಪರಿಶುದ್ಧವಾದ ರಾಜಕಾರಣ, ಆಡಳಿತ ಮಾಡುತ್ತಿದ್ದೇನೆ. ಇದನ್ನು ಅವರ ಕೈಯಲ್ಲಿ ತಡೆದುಕೊಳ್ಳಲು ಆಗುತ್ತಿಲ್ಲ ಎಂದರೆ ಏನು ಮಾಡಲು ಆಗುವುದಿಲ್ಲ ಎಂದು ತಿರುಗೇಟು ನೀಡಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular