HomeLatest NewsBIG NEWS: ಅವರು ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ: ಬಿಜಿಪಿ ಸಂಸದರ ಬಗ್ಗೆ ಡಿಸಿಎಂ...

BIG NEWS: ಅವರು ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ: ಬಿಜಿಪಿ ಸಂಸದರ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವ್ಯಂಗ್ಯ

ಶಿವಮೊಗ್ಗ: ಕೇಂದ್ರ ಸರ್ಕಾರದಿಂದ ಬಜೆಟ್‌ ಅಲ್ಲಿ ಕರ್ನಾಟಕಕ್ಕೆ ಯಾವಾಗಲೂ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ. ಇದರ ಬಗ್ಗೆ ಬಿಜೆಪಿ ಸಂಸದರು, ಕೇಂದ್ರ ಸಚಿವರು ಯಾರೂ ಧ್ವನಿ ಎತ್ತಿಲ್ಲ. ಅವರು ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ವ್ಯಂಗ್ಯವಾಡಿದ್ದಾರೆ.

ಶಿವಮೊಗ್ಗದ ಸರ್ಕಿಟ್‌ ಹೌಸ್‌ ಬಳಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌, ಕೇಂದ್ರ ಬಜೆಟ್‌ ಬಗೆಗಿನ ನಿರೀಕ್ಷೆ ವಿಚಾರವಾಗಿ ಕೇಂದ್ರ ಬಜೆಟ್‌ ನಲ್ಲಿ ಕೊಟ್ಟ ಮಾತನ್ನೇ ಉಳಿಸಿಕೊಂಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಕೊಡುತ್ತೇನೆ ಎಂದು ಹೇಳಿ ಕೊಟ್ಟಿಲ್ಲ ಎಂದರು.

ಕಾಂಗ್ರೆಸ್‌ ಭ್ರಷ್ಟಾಚಾರ ಎಂದು ಬಿಜೆಪಿ ಪೋಸ್ಟರ್‌ ಅಭಿಯಾನ ಹಾಗೂ ತಿಮ್ಮಾಪುರ ಅವರ ರಾಜಿನಾಮೆಗೆ ಪಟ್ಟು ಹಿಡಿದಿರುವ ವಿಚಾರವಾಗಿ, ಬಿಜೆಪಿಯವರ ಹಗರಣಗಳನ್ನು ನಾವು ಸಹ ಸಾಕಷ್ಟು ಬಿಚ್ಚಿದ್ದೇವೆ. ಕೋವಿಡ್‌ ಸೇರಿದಂತೆ ಹಿಂದೆ ಇದ್ದಂತಹ ಅನೇಕ ಆರೋಪಗಳಿವೆ. ನಾವು ಅವುಗಳನ್ನು ಬಯಲು ಮಾಡೋಣ. ರಾಜಕೀಯ ಮಾಡಬೇಕಲ್ಲ ಎಂದು ಮಾಡುತ್ತಿದ್ದಾರೆ. ಏನೋ ಒಂದು ಬೇಕಲ್ಲ ಅವರಿಗೆ. ಇದರ ಬಗ್ಗೆ ತನಿಖೆ ಮುಗಿಯಲಿ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮನರೇಗಾ ಬಗ್ಗೆ ಚರ್ಚೆಗೆ ವಿಶೇಷ ಅಧಿವೇಶನ ವಿಸ್ತರಿಸಲಾಗಿದೆ ಎಂಬ ಹೇಳಿಕೆ ಬಗ್ಗೆ ಮುಖ್ಯಮಂತ್ರಿಗಳು ಸದನದಲ್ಲಿ ಮನರೇಗಾ ವಿಚಾರವಾಗಿ ಪ್ರಸ್ತಾಪ ಮಾಡಿದ್ದು, ಇದನ್ನು ಕಾರ್ಯಕಲಾಪ ಸಲಹಾ ಸಮಿತಿ ಮುಂದಿಟ್ಟು ತೀರ್ಮಾನ ಮಾಡಬೇಕು ಎಂದು ಸಭಾಧ್ಯಕ್ಷರು ತಿಳಿಸಿದ್ದರು. ಅದರಂತೆ ಗುರುವಾರ ಇದರ ಬಗ್ಗೆ ಚರ್ಚೆಯಾಗಿದೆ. ವಿಬಿ ಗ್ರಾಮ್ ಜಿ ಕಾಯ್ದೆಯನ್ನು ಏಕೆ ರದ್ದು ಮಾಡಬೇಕು ಎಂದು ನಾವು ತಿಳಿಸುತ್ತೇವೆ. ಏಕೆಂದರೆ ಈಗಿರುವ ಪರಿಸ್ಥಿತಿಯಲ್ಲಿ ಯಾವ ರಾಜ್ಯದಲ್ಲಿಯೂ ಇದನ್ನು ಜಾರಿಗೆ ತರಲು ಸಾಧ್ಯವಿಲ್ಲ. ಈಗ ನಾಲ್ಕೈದು ತಿಂಗಳು ವ್ಯವಸಾಯದ ಕಾಲ. ಈ ಸಮಯದಲ್ಲಿ ರೈತರು ಅವರವರ ಕೂಲಿಯನ್ನು ಅವರು ಪಡೆದುಕೊಳ್ಳುತ್ತಿದ್ದರು. ಇಂತಹ ಸಮಯದಲ್ಲಿಯೇ ನರೇಗಾ ಯೋಜನೆ ತೆಗೆದು ಹಾಕಿದರೆ ಯಾರಿಗೂ ಏನೂ ಅನುಕೂಲವಾಗುವುದಿಲ್ಲ. ಮಾನವ ದಿನಗಳನ್ನು 125 ದಿನಗಳಿಗೆ ಹೆಚ್ಚಳ ಮಾಡಿದ್ದೇವೆ ಎಂದು ಹೇಳಬಹುದು. ಆದರೆ ಬೇರೆ ಸಮಯದಲ್ಲಿ ಇಷ್ಟು ದಿನಗಳ ಕಾಲ ಕೆಲಸ ನೀಡಲು ಸಾಧ್ಯವಿಲ್ಲ. ಒಂದೊಂದು ಪಂಚಾಯತಿಗೆ ತಲಾ 1- 1.5 ಕೋಟಿ ರೂ. ಅನುದಾನ ನಷ್ಟವಾಗುತ್ತಿದೆ. ಜಾಬ್‌ ಕಾರ್ಡ್‌ ಹೊಂದಿರುವವರಿಗೂ ನಷ್ಟ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular