HomeLatest Newsಒಮ್ಮತದಿಂದಲೇ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ: ಸೋಮವಾರ ನಾಮಪತ್ರ ಸಲ್ಲಿಕೆಯಲ್ಲಿ ಭಾಗಿ: ಡಿಸಿಎಂ ಡಿ.ಕೆ.ಶಿವಕುಮಾರ್

ಒಮ್ಮತದಿಂದಲೇ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ: ಸೋಮವಾರ ನಾಮಪತ್ರ ಸಲ್ಲಿಕೆಯಲ್ಲಿ ಭಾಗಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಎಚ್‌.ವೈ. ಮೇಟಿ ಅವರ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಮಲ್ಲಿಕಾರ್ಜುನ ಅವರಿಗೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು, ಮುಖ್ಯಮಂತ್ರಿಯವರು ಹಾಗೂ ಜಮೀರ್ ಅಹಮದ್, ನಾಸೀರ್ ಹುಸೇನ್, ಸಲೀಂ ಅಹ್ಮದ್, ಹುಸೇನ್, ಹ್ಯಾರಿಸ್, ಜಬ್ಬಾರ್ ಅವರು ಎಲ್ಲ ಅಲ್ಪಸಂಖ್ಯಾತ ನಾಯಕರು, ಎಐಸಿಸಿ ಕಾರ್ಯದರ್ಶಿಗಳ ಜತೆ ಮಾತನಾಡಿ ಒಮ್ಮತದ ತೀರ್ಮಾನಕ್ಕೆ ಬಂದು ಶಾಮನೂರು ಅವರ ಕುಟುಂಬಕ್ಕೆ ಅವಕಾಶ ಮಾಡಿಕೊಡಲಾಗಿದೆ. ಒಗ್ಗಟ್ಟಿನಿಂದ ಚುನಾವಣೆ ಮಾಡಿ ಎರಡೂ ಕ್ಷೇತ್ರಗಳನ್ನು ಗೆಲ್ಲಿಸಿಕೊಂಡು ಬರುವ ತೀರ್ಮಾನ ಮಾಡಲಾಗಿದೆ ಎಂದರು.

ಮಗನ ಬಿ ಫಾರಂ ಅನ್ನು ತಂದೆಯವರಾದ ಎಸ್.ಎಸ್.ಮಲ್ಲಿಕಾರ್ಜುನ ಅವರ ಕೈಯಲ್ಲಿ ಕೊಡಲಾಗಿದೆ. ನಾಳೆ ಸೋಮವಾರ ದಾವಣಗೆರೆ ಹಾಗೂ ಬಾಗಲಕೋಟೆಗೆ ನಾನು ಹಾಗೂ ಮುಖ್ಯಮಂತ್ರಿಯವರು ತೆರಳಿ ನಾಮಪತ್ರ ಸಲ್ಲಿಕೆ ಸಮಾರಂಭದಲ್ಲಿ ಭಾಗವಹಿಸುತ್ತೇವೆ. ಟಿಕೆಟ್ ವಿಚಾರವಾಗಿ ಮಾಧ್ಯಮಗಳು ಮಾಡುತ್ತಿದ್ದ ವಿಭಿನ್ನ ಚರ್ಚೆಗಳಿಗೆ ತೆರೆ ಎಳೆಯಲಾಗಿದೆ. ಹೈಕಮಾಂಡ್ ಟಿಕೆಟ್ ಹಂಚಿಕೆ ಬಗ್ಗೆ ತಡರಾತ್ರಿ ತಿಳಿಸಿತು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬುಧವಾರ ಶಾಸಕಾಂಗ ಪಕ್ಷದ ಸಭೆಯನ್ನು ನಿಗಧಿ ಮಾಡಲಾಗಿದೆ. ಎಐಸಿಸಿ ಕಾರ್ಯದರ್ಶಿಗಳು ಸಹ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ಅಲ್ಪಸಂಖ್ಯಾತರು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ. ಜನಸಂಖ್ಯೆ ಆಧಾರದ ಮೇಲೆ ಕೇಳುತ್ತಿದ್ದಾರೆ. ಅವರದ್ದು ತಪ್ಪಿಲ್ಲ. ದಿನಾಂಕ ಚೆನ್ನಾಗಿದೆ ಎಂದು ನಾಮಪತ್ರ ಸಲ್ಲಿಕೆ ಮಾಡಿರುವುದಾಗಿ ಮಲ್ಲಿಕಾರ್ಜುನ್ ಅವರು ಹೇಳಿದರು. ನಮಗೂ ನಂಬಿಕೆ ಇದ್ದಂತೆ ಅವರಿಗೂ ಇದೆ. ಪಕ್ಷ ಹೇಳಿದರೆ ವಾಪಸ್ ಪಡೆಯುವುದಾಗಿ ತಿಳಿಸಿದ್ದಾರೆ. ಸಮರ್ಥ್ ಅವರ ತಾಯಿ ಪ್ರಭಾ ಮಲ್ಲಿಕಾರ್ಜುನ ಅವರಿಗೂ ಸಂಸದ ಸ್ಥಾನಕ್ಕೆ ನಿಲ್ಲಲು ಇಷ್ಟ ಇರಲಿಲ್ಲ. ಒತ್ತಾಯದಿಂದ ನಿಲ್ಲಿಸಿದ್ದು. ಮಲ್ಲಿಕಾರ್ಜುನ್ ಅವರಿಗೂ ಇಷ್ಟ ಇರಲಿಲ್ಲ. ಈಗ ಅವರು ಪಕ್ಷದ ಆಸ್ತಿಯಾಗಿ ಬೆಳೆಯುತ್ತಿದ್ದಾರೆ ಎಂದರು‌.

ಆಸೆ ಪಡುವುದು ತಪ್ಪಲ್ಲ. ಮೇಟಿ ಕುಟುಂಬದಲ್ಲಿ ನನಗೆ ಮಲ್ಲಿಕಾರ್ಜುನ ಅವರಿಗೆ ನೀಡುವುದಕ್ಕೆ ಆಸೆಯಿತ್ತು.‌ ಜಿಲ್ಲಾ ಪಂಚಾಯತಿ ಸದಸ್ಯೆಯಾದ ಇನ್ನೊಬ್ಬ ಮಗಳು ಟಿಕೆಟ್ ಕೇಳಿದ್ದರು. ಇನ್ನೊಬ್ಬ ಮಗಳು ಸೇರಿದಂತೆ ಒಟ್ಟು ಅವರ ಕುಟುಂಬದಲ್ಲಿಯೇ ನಾಲ್ಕು ಜನ ಕೇಳಿದ್ದರು. ಕುಟುಂಬದಲ್ಲಿಯೇ ಆಸೆ ಇರುವಾಗ ಬೇರೆಯವರಿಗೂ ಇರುತ್ತದೆ. ಬಾಗಲಕೋಟೆಗೆ ಬೇರೆ, ಬೇರೆ ಹೆಸರುಗಳೂ ಬಂದಿತ್ತು ಎಂದರು‌.

ಬಿಜೆಪಿ ಜೆಡಿಎಸ್ ಅವರು ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ನಿಲ್ಲಿಸುತ್ತಿರುವ ಬಗ್ಗೆ ಕೇಳಿದಾಗ, ಗೊತ್ತು, ಈ ಎಲ್ಲಾ ಪ್ರಯತ್ನ ನಡೆಯುತ್ತಾ ಇದೆ. ರಾಜಕಾರಣ ಅಂದ ಮೇಲೆ ಅವರು ಡಿಫರೆನ್ಸ್ ಉಂಟು ಮಾಡುತ್ತಾರೆ, ನಾವೂ ಮಾಡುತ್ತೇವೆ. ಅವರಲ್ಲಿ ಒಮ್ಮತ ಇದೆಯೇ? ಇಬ್ಬರು ಗಲಾಟೆ ಮಾಡಿದ್ದಕ್ಕೆ ಮೂರನೆಯವರಿಗೆ ನೀಡಿದ್ದಾರೆ. ನಾನು ಏಕೆ ಅದನ್ನು ಚರ್ಚೆ ಮಾಡಲು ಹೋಗಲಿ. ಅದು ಅವರ ಪಕ್ಷದ ತೀರ್ಮಾನ, ಇದು ನಮ್ಮ ಪಕ್ಷದ ತೀರ್ಮಾನ ಎಂದರು‌.

ನಮ್ಮದು ನಮಗೆ, ಅವರದ್ದು ಅವರಿಗೆ. ಬೇರೆ ಪಕ್ಷಗಳ ಬಗ್ಗೆ ಚರ್ಚೆ ಮಾಡುವುದಕ್ಕೆ ಹೋಗುವುದಿಲ್ಲ. ಯಾವ ಅಭ್ಯರ್ಥಿಗಳನ್ನು ಸಹ ಬೇಕಾದರೂ ಹಾಕಲಿ ಎಂದರು.

ದಾವಣಗೆರೆಗೆ ಶಿವಶಂಕರಪ್ಪ ಅವರು ಮಾಡಿರುವ ಸೇವೆ, ಅಭಿವೃದ್ಧಿ ಅತ್ಯುತ್ತಮವಾಗಿದೆ. ಬೆಂಗಳೂರು ನಗರ ಯಾವ ರೀತಿ ಇದೆಯೋ‌ ಅದಕ್ಕಿಂತ ಚೆನ್ನಾಗಿ ದಾವಣಗೆರೆಯಿದೆ. ನಾನೇ ಅದನ್ನೆಲ್ಲಾ ಕಣ್ಣಲ್ಲಿ ನೋಡಿದ್ದೇನೆ. ಕುಡಿಯುವ ನೀರು, ಬಡವರಿಗೆ ಮನೆ ನೀಡಿದ್ದಾರೆ. ವಿದ್ಯಾಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದಾರೆ. ಕಳೆದ 40 ವರ್ಷಗಳಿಂದ ಸೇವೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಶಾಮನೂರು ಅವರ ಕುಟುಂಬ ಮೊದಲಿನಿಂದಲೂ ನಿಂತಿದೆ ಎಂದರು‌.

ಅಸಮಾಧಾನ ನಿಮ್ಮ ಬಳಿ ಹೇಳಿರಬಹುದು. ನಮ್ಮ ಬಳಿ ಹೇಳಿಲ್ಲ. ಅದಕ್ಕೆ ನಾವು ಮೂರು ಬಾರಿ ಜಬ್ಬಾರ್ ಅವರನ್ನು ಎಂಎಲ್‌ ಸಿ ಮಾಡಿರುವುದು. ಜಬ್ಬಾರ್ ಅವರನ್ನು ಇದೇ ಶಿವಶಂಕರಪ್ಪ ಅವರು ಎಸ್.ಎಂ.ಕೃಷ್ಣ ಅವರ ಕಾಲ, ಸಿದ್ದರಾಮಯ್ಯ ಅವರ ಕಾಲದಲ್ಲೂ ಎಂಎಲ್‌ ಸಿ ಮಾಡಿದ್ದಾರೆ. ಆಗಾಗ್ಗೆ ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗುತ್ತಿರುತ್ತದೆ. ಪರಿಷತ್ ‌ಸ್ಥಾನವನ್ನು ಮಾನೆ ಅವರ ಬದಲಿಗೆ ಧಾರವಾಡದಿಂದ ಸಲೀಂ ಅವರಿಗೆ ನೀಡಿದೆವು. ಬೋಸ್ ಅವರಿಗೆ ನೀಡಬೇಕಿತ್ತು. ಅದನ್ನು ಬಿಟ್ಟು ಪರ್ಯಾಯ ವ್ಯವಸ್ಥೆ ಮಾಡಲಿಲ್ಲವೇ? ಕೆಲವು ಸಂದರ್ಭಗಳಲ್ಲಿ ಈ ರೀತಿ ಮಾಡಬೇಕಾಗುತ್ತದೆ ಎಂದರು‌.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular