ಬೆಂಗಳೂರು: ಸಚಿವ ಸಂಪುಟ ಪುನರ್‌ರಚನೆಗೆ ಸಂಬಂಧಿಸಿದಂತೆ, ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಯಾರ್ಯಾರು ಸಚಿವ ಸ್ಥಾನಗಳನ್ನು ಪಡೆಯಲಿದ್ದಾರೆ ಎಂಬ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.
ಸಚಿವ ಸ್ಥಾನದ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳಲಿದೆ. ಯಾರ್ಯಾರು ಸಚಿವರಾಗುತ್ತಾರೆ ಅದನ್ನ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಈ ಬಗ್ಗೆ ನನಗೆ ಇನ್ನು ಮಾಹಿತಿ ಇಲ್ಲ ಎಂದರು.
ಪಕ್ಷದ ಹೈಕಮಾಂಡ್ ಏನು ನಿರ್ಧಾರ ಮಾಡುತ್ತದೆಯೋ ಅದು ಜಾರಿಗೆ ಬರಲಿದೆ. ನಾನು ಅದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದಿದ್ದಾರೆ. ನನ್ನೊಂದಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವವರ ಬಗ್ಗೆಯೂ ಗೊತ್ತಿಲ್ಲ ಎಂದದು ಹೇಳಿದರು. ಎಲ್ಲವೂ ಹೈಕಮಾಂಡ್ ಕೈಯಲ್ಲಿದೆ ಎಂದು ತಿಳಿಸಿದರು.

