HomeKarnatakaಖಾತೆ ಹಂಚಿಕೆ ಕಸರತ್ತು: ಖರ್ಗೆ ಭೇಟಿಯಾದ ಸಿಎಂ ಡಿ.ಕೆ.ಶಿವಕುಮಾರ್: 2-3 ಸಚಿವರು ಬದಲಾವಣೆ ಸಾಧ್ಯತೆ

ಖಾತೆ ಹಂಚಿಕೆ ಕಸರತ್ತು: ಖರ್ಗೆ ಭೇಟಿಯಾದ ಸಿಎಂ ಡಿ.ಕೆ.ಶಿವಕುಮಾರ್: 2-3 ಸಚಿವರು ಬದಲಾವಣೆ ಸಾಧ್ಯತೆ

ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿ ಒಂದು ವಾರ ಕಳೆದರೂ ನೂತನ ಸಚಿವರಿಗೆ ಖಾತೆ ಹಂಚಿಕೆಯಾಗಿಲ್ಲ. ಪ್ರಭಾವಿ ಖಾತೆಗಳಿಗಾಗಿ ಸಚಿವ ಲಾಭಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಖಾತೆ ಹಂಚಿಕೆ ಕಗ್ಗಂತಾಗಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ್ದು, ನಿನ್ನೆ ತಡ ರಾತ್ರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಸಚಿವ ಸ್ಥಾನ ವಂಚಿತ ಹಿರಿಯ ಶಾಸಕರ ಅಸಮಾಧಾನ ತಣಿಸುವುದು ಹಾಗೂ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವ ವಿಚಾರದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಸಾಕಷ್ಟು ಕಸರತ್ತು ನಡೆಸುತ್ತಿದ್ದಾರೆ. ಆಗಸ್ಟ್ 13ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಅದಕ್ಕೂ ಮುನ್ನ ಖಾತೆ ಹಂಚಿಕೆ ಪೂರ್ಣಗೊಳಿಸುವ ಅಗತ್ಯವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲ್ಲದೇ ಖಾಲಿ ಇರುವ ಒಂದು ಸಚಿವ ಸ್ಥಾನವನ್ನು ಭರ್ತಿ ಮಾಡಬೇಕಾಗಿದೆ. ಸಚಿವ ಸಂಪುಟದಲ್ಲಿ ಮಹಿಳಾ ಶಾಸಕಿಯರಿಗೆ ಸ್ಥಾನ ಕೊಡುವಅಗ್ತವಿರುವುದರಿಂದ ಇರುವ ಒಂದು ಸ್ಥಾನಕ್ಕಾಗಿ ಮಹಿಳಾ ಶಾಸಕಿಯರ ಪೈಪೋಟಿ ಹೆಚ್ಚಾಗಿದೆ.

ಇದರ ನಡುವೆ ಸಚಿವ ಸ್ಥಾನ ವಂಚಿತ ಹಿರಿಯ ಶಾಸಕರ ಅತೃಪ್ತಿ ಇನ್ನೂ ಶಮನವಾಗದ ಹಿನ್ನೆಲೆಯಲ್ಲಿ ಎರಡು-ಮೂರು ಮಂದಿ ಸಚಿವರ ಬದಲಾವಣೆಯ ಸಾಧ್ಯತೆಯೂ ಚರ್ಚೆಯಲ್ಲಿದೆ. ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ಕಲ್ಪಿಸಲು ಕೆಲ ಸಚಿವರನ್ನು ಬದಲಾಯಿಸುವ ಬಗ್ಗೆ ರಾಹುಲ್ ಗಾಂಧಿ ಅವರ ಒಪ್ಪಿಗೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದಲ್ಲದೆ, ಈಗಾಗಲೇ ಹಂಚಿಕೆಯಾಗಿರುವ ಕೆಲವು ಸಚಿವರ ಖಾತೆಗಳನ್ನು ಅದಲು-ಬದಲು ಮಾಡುವ ಬಗ್ಗೆಯೂ ಚಿಂತನೆ ನಡೆದಿದೆ. ಹೆಚ್ಚುವರಿ ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ವಿಚಾರವೂ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗುವ ನಿರೀಕ್ಷೆಯಿದೆ. ಹೈಕಮಾಂಡ್ ಒಪ್ಪಿಗೆ ಸೂಚಿಸಿದರೆ, ಇಂದು ಸಂಜೆಯೇ ಖಾತೆ ಹಂಚಿಕೆ ಹಾಗೂ ಬದಲಾವಣೆ ನಡೆಯುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಸಮಾಜ ಕಲ್ಯಾಣ ಇಲಾಖೆ ಖಾತೆಗಾಗಿ ಸಚಿವ ಶಿವರಾಜ್ ತಂಗಡಗಿ ಮತ್ತು ಕೆ.ಎಚ್. ಮುನಿಯಪ್ಪ ನಡುವೆ ಪೈಪೋಟಿ ನಡೆದಿದೆ ಎನ್ನಲಾಗಿದೆ. ತಂಗಡಗಿ ನಿನ್ನೆ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮತ್ತೊಂದೆಡೆ, ಹಾಲಿ ಆಹಾರ ಇಲಾಖೆಯ ಬಗ್ಗೆ ಸಚಿವ ಕೆ.ಎಚ್. ಮುನಿಯಪ್ಪ ಅಸಮಾಧಾನ ಹೊಂದಿದ್ದು, ಸಮಾಜ ಕಲ್ಯಾಣ ಇಲಾಖೆ ಮೇಲೆ ಕಣ್ಣಿಟ್ಟಿದ್ದಾರೆ. ಮುನಿಯಪ್ಪ ಕೂಡ ಖರ್ಗೆ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಒಟ್ಟಾರೆ ಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಪ್ರವಾಸದ ವೇಳೆ ಖಾತೆ ಹಂಚಿಕೆ ಪಟ್ತಿ ಫೈನಲ್ ಆಗುತ್ತಾ? ಕಾದುನೋಡಬೇಕಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular