ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯಾದರೂ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡದೇ ವಿಳಂಬ ಧೋರಣೆ ಅನುಸರಿಸುತ್ತಿರುವ ಬಗ್ಗೆ ವಿಪಕ್ಷಗಳು ಸರ್ಕಾರ ಹಾಗೂ ಕಾಂಗ್ರೆಸ್ ಹೈಕಮಾಂಡ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ಖಾತೆ ಹಂಚಿಕೆ ವಿಚಾರಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೆರೆ ಎಳೆದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ಇಂದು ಸಂಜೆಯೊಳಗೆ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿ ಪಟ್ಟಿ ಬಿಡುಗಡೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದರೊಂದಿಗೆ ಹೊಸ ಸಚಿವರಿಗೆ ಖಾತ ಹಂಚಿಕೆ ಯಾವಾಗ? ಯಾರಿಗೆ ಯಾವ ಖಾತೆ? ಎಂಬ ಕುತೂಹಲಗಳಿಗೆ ಇಂದು ಸಂಜೆಯೇ ಫುಲ್ ಸ್ಟಾಪ್ ಬೀಳಲಿದೆ. ವಿಧಾನ ಮಂಡಲ ಮಳೆಗಾಲದ ಅಧಿವೇಶನಕ್ಕೆ ಎರಡು ದಿನ ಮಾತ್ರ ಬಾಕಿ ಇದ್ದು, ಈ ಹಿನ್ನೆಲೆಯಲ್ಲಿ ಅಧಿವೇಶನ ಆರಂಭವಾಗುವ ಮೊದಲೇ ಖಾತೆ ಹಂಚಿಕೆ ಮಾಡುವುದಾಗಿ ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದರು. ಅದರಂತೆಯೇ ಇಂದು ಸಂಜೆಯೇ ನೂತನ ಸಚಿವರಿಗೆ ಖಾತೆ ಹಂಚಿಕೆಯಾಗಲಿದೆ.
ಇಂದು ಸಂಜೆ ಯಾವುದೇ ಸಂದರ್ಭದಲ್ಲಿ ಖಾತೆ ಹಂಚಿಕೆ ಪಟ್ಟಿ ಬಿಡುಗಡೆಯಾಗಲಿದೆ. ಹೀಗಾಗಿ ಯಾರಿಗೆ ಯಾವ ಖಾತೆ ಸಿಗಲಿದೆ ಎಂಬ ಕಾಯುವಿಕೆಗೆ ಶೀಘ್ರದಲ್ಲೇ ತೆರೆ ಬೀಳಲಿದೆ.

