HomeKarnatakaಪಕ್ಷ ಕೆಲ ಸಂದರ್ಭಗಳಲ್ಲಿ ಕೆಲ ನಿರ್ಧಾರಗಳನ್ನು ಕೈಗೊಳ್ಳುತ್ತೆ: ಎಲ್ಲರೂ ತಾಳ್ಮೆಯಿಂದ ಇರುವಂತೆ ಸಿಎಂ ಡಿ.ಕೆ.ಶಿವಕುಮಾರ್ ಮನವಿ

ಪಕ್ಷ ಕೆಲ ಸಂದರ್ಭಗಳಲ್ಲಿ ಕೆಲ ನಿರ್ಧಾರಗಳನ್ನು ಕೈಗೊಳ್ಳುತ್ತೆ: ಎಲ್ಲರೂ ತಾಳ್ಮೆಯಿಂದ ಇರುವಂತೆ ಸಿಎಂ ಡಿ.ಕೆ.ಶಿವಕುಮಾರ್ ಮನವಿ

ಬೆಂಗಳೂರು: ಕೊನೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಹಲವು ಸಚಿವಾಕಾಂಕ್ಷಿಗಳಿಗೆ ಮಂತ್ರಿ ಸ್ಥಾನ ಸಿಗದೇ ಅಸಮಾಧಾನಗೊಂಡಿದ್ದಾರೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೇಸರಗೊಂಡಿರುವ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಆರಂಭಿಸಿದ್ದಾರೆ.

ಈ ಬೆಳವಣಿಗೆ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಲೋಕಭವನಕ್ಕೆ ನೂತನ ಸಚಿವರ ಪಟ್ಟಿ ಕಳುಹಿಸಿದ್ದೇನೆ. ಪಕ್ಷ ಕೆಲ ಸಂದರ್ಭಗಳಲ್ಲಿ ಕೆಲ ನಿರ್ಧಾರಗಳನ್ನು ಕೈಗೊಳ್ಳುತ್ತದೆ. ಹಿಂದೆ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ನನಗೂ ಸಚಿವ ಸ್ಥಾನ ಸಿಕ್ಕಿರಲಿಲ್ಲ. ನನಗೆ ಅವಕಾಶ ಸಿಗದಿದ್ದರೂ ನಾನು ತಾಳ್ಮೆ ಕಳೆದೊಕೊಳ್ಳದೇ ಸಹನೆಯಿಂದ ಇದ್ದೆ. ಅಂದು ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಇಂದು ಈ ಸ್ಥಾನದವರೆಗೂ ಬಂದಿದ್ದೇನೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಗೆ ತಾಳ್ಮೆಯಿಂದ ಇದ್ದರೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ಸಿಗುತ್ತದೆ. ಯಾರೂ ತಾಳ್ಮೆ ಕಳೆದುಕೊಳ್ಳಬಾರದು ಎಲ್ಲರೂ ತಾಳ್ಮೆಯಿಂದ ಇರಬೇಕು ಎಂದು ನಾನು ಮನವಿ ಮಾಡುತ್ತೇನೆ ಎಂದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular