HomeKarnatakaಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ: ಸಿಎಂ ಡಿ.ಕೆ.ಶಿವಕುಮಾರ್

ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ: ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದಾಗ, ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಮಾಧ್ಯಮಗಳು ಆತುರದಲ್ಲಿದ್ದೀರಿ. ಈವಾರದಲ್ಲಿಯೇ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೆಹಲಿಯಲ್ಲಿ ಸಂಸದರ ಜೊತೆಗಿನ ಸಭೆ ವಿಚರವಾಗಿ, ಇಂದು ನಮ್ಮ ಸಂಸತ್ ಸದಸ್ಯರನ್ನು ಭೇಟಿ ಮಾಡುತ್ತಿದ್ದು, ಅವರಿಗೆ ರಾಜ್ಯದ ಬರ ಪರಿಸ್ಥಿತಿ, ನೀರಿನ ಪರಿಸ್ಥಿತಿ, ಕಾವೇರಿ, ಮಹದಾಯಿ, ಮೇಕೆದಾಟು, ಕೃಷ್ಣ ಸೇರಿದಂತೆ ಅನೇಕ ನೀರಾವರಿ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕಾಗಿದೆ ಎಂದರು.

ನಾನು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಯಾವ ವಿಚಾರದಲ್ಲಿ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು ಎಂದು ಸಂಸದರಿಗೆ ಮನವಿ ಮಾಡಲು ಹೋಗುತ್ತಿದ್ದೇನೆ. ನಂತರ ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ಕರೆಯಲಾಗುವುದು. ರಾಜ್ಯದ ಹಿರಿಯ ನಾಯಕರ ಜೊತೆಗೂ ಪ್ರಮುಖ ವಿಚಾರಗಳನ್ನು ಚರ್ಚಿಸಲಾಗುವುದು ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular