ಬೆಂಗಳೂರು: ಸಿದ್ದರಾಮ್ಯಯ ರಾಜೀನಾಮೆ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಇಂದು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಡಿ.ಕೆ.ಶಿವಕುಮಾರ್ ಜೊತೆಗೆ 13 ಜನ ಶಾಸಕರು ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ.
ಈಗಾಗಲೇ ಡಾ.ಜಿ.ಪರಮೇಶ್ವರ್, ಯತೀಂದ್ರ ಸಿದ್ದರಾಮಯ್ಯ, ರಾಮಲಿಂಗಾರೆಡ್ಡಿ, ಶರಣ ಪ್ರಕಾಶ್ ಪಾಟೀಲ್, ಈಶ್ವರ್ ಖಂಡ್ರೆ, ಪ್ರಿಯಾಂಕ್ ಖರ್ಗೆ, ಕೃಷ್ಣಬೈರೇಗೌಡ, ಯು.ಟಿ.ಖಾದರ್, ಕೆ.ಹೆಚ್.ಮುನಿಯಪ್ಪ, ಎಂ.ಬಿ.ಪಾಟೀಲ್, ಭೈರತಿ ಸುರೇಶ್ ಸೇರಿದಂತೆ ಹಲವರಿಗೆ ಖುದ್ದು ಡಿ.ಕೆ.ಶಿವಕುಮಾರ್ ಅವರೇ ಕರೆ ಮಾಡಿ ಲೋಕಭವನಕ್ಕೆ ಸಂಜೆ 4 ಗಂಟೆಗೆ ಪ್ರಮಾಣವಚನ ಸ್ವೀಕಾರಕ್ಕೆ ಬರುವಂತೆ ತಿಳಿಸಿದ್ದಾರೆ.
ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗುವುದು ಎಂದು ಹೇಳಲಾಗಿತ್ತು. ಆದರೆ ಈಗ ಪರಮೆಶ್ವರ್ ಅವರಿಗೆ ಕಂದಾಯ ಇಲಾಖೆ ಹಾಗೂ ಪ್ರಿಯಾಂಕ್ ಖರ್ಗೆ ಅವರಿಗೆ ಗೃಹ ಖಾತೆ ನೀಡುವ ಬಗ್ಗೆ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ. ಆದರೆ ಈಬಗ್ಗೆ ಯಾವುದೇ ಅಧಿಕೃತವಾಗಿ ಮಾಹಿತಿ ಲಭ್ಯವಾಗಿಲ್ಲ.

