HomeKarnatakaBIG NEWS: ದೆಹಲಿಗೆ ಹೋಗಿರುವ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್

BIG NEWS: ದೆಹಲಿಗೆ ಹೋಗಿರುವ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಸಂಪುಟ ಪುನಾರಚನೆ ಚಟುವಟಿಕೆಗಳು ಜೋರಾಗಿದ್ದು, ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ನಮಗೂ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ ಭೇಟಿಯಾಗಿ ಮನವಿ ಮಾಡಲು ತೆರಳಿದ್ದಾರೆ.

25 ಕ್ಕೂ ಅಧಿಕ ಕಾಂಗ್ರೆಸ್ ಶಾಸಕರು ಹೈಕಮಾಂಡ್‌ ಭೇಟಿಗೆ ದೆಹಲಿಗೆ ತೆರಳಿದ್ದಾರೆ. ಶಾಸಕರ ದೆಹಲಿ ಯಾತ್ರೆಗೆ ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಸಿದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೆಹಲಿಗೆ ತೆರಳಿರುವ ಶಾಸಕರಿಗೆ ಖಡಕ್ ಎಚ್ಚರಿಕೆಯನ್ನೂ ನೀಡಿದ್ದಾರೆ. ಪಕ್ಷದ ಶಿಸ್ತನ್ನು ಯಾರೂ ಮೀರಬೇಡಿ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸಚಿವ ಸ್ಥಾನಕ್ಕಾಗಿ ಆಗ್ರಹಿಸಿ ಶಾಸಕರ ದೆಹಲಿ ಪ್ರವಾಸ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಿ.ಕೆ ಶಿವಕುಮಾರ್, ಪಕ್ಷದ ಶಿಸ್ತನ್ನು ಯಾರೂ ಮೀರಬೇಡಿ. ಪಕ್ಷದ ಚೌಕಟ್ಟಿನ ಒಳಗೆ ಎಲ್ಲಾ ಶಾಸಕರು ಮಾತನಾಡಬೇಕು. ಕೆಲವರು ಏನೇನು​ ಮಾತನಾಡಿದ್ದಾರೋ ಎಲ್ಲವನ್ನೂ ಗಮನಿಸಿದ್ದೇನೆ ಎಂದು ತಿಳಿಸಿದ್ದಾರೆ.

ಮೀಡಿಯಾ ನಿಮ್ಮ ಭವಿಷ್ಯ ಅಲ್ಲ, ಪಾರ್ಟಿ ನಿಮ್ಮ ಭವಿಷ್ಯ. ಪಾರ್ಟಿಯಲ್ಲೇ ಎಲ್ಲರ ಭವಿಷ್ಯವಿದೆ, ಪಕ್ಷದ ಚೌಕಟ್ಟಿನೊಳಗೆ ಇರಬೇಕು. ಇದು ಸಂಪುಟ ಪುನಾರಚನೆ ಕೇಳುವ ಟೈಂ ಅಲ್ಲ. ಈಗ ಮಂತ್ರಿ ಮಾಡೋ ಟೈಂ ಅಲ್ಲ, ಮೊದಲು ಚುನಾವಣೆ ಮಾಡೋಣ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಹೈಕಮಾಂಡ್ ನಾಯಕರನ್ನು ಭೇಟಿ ಮಾಡೋದು ತಪ್ಪೇನಲ್ಲ. ಆದರೆ ಏನೇನೋ ಕಮೆಂಟ್ ಮಾಡೋದಾದ್ರೆ ನಾವು ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ನನ್ನ ಹತ್ತಿರ ಕೆಲವರು ಬಂದು ಹೇಳಿದ್ದರು. ಹೋಗಿ ಕೇಳೋದರಲ್ಲಿ ತಪ್ಪು ಇಲ್ಲ . ಫಸ್ಟ್ ಎಂಎಎಲ್ ಆದವರು, ಎರಡನೇ ಬಾರಿ ಆದವರು ಕೇಳೋದು ತಪ್ಪು ಏನೆಲ್ಲ. ಹಿಂದೆ ಎಲ್ಲಾ ನಡೆದಿದೆ. ಆದ್ರೆ ಇದು ಸಮಯ ಅಲ್ಲ, ಈಗ ಎಲೆಕ್ಷನ್ ಇನ್ನೂ ನಡೆಯುತ್ತಿದೆ. ಹೀಗಾಗಿ ಮೊದಲು ಎಲೆಕ್ಷನ್ ಮಾಡೋಣ ಎಂದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular