ದೇಶಾದ್ಯಂತ ಮತದಾನ ಅಕ್ರಮ ಬಹಿರಂಗಕ್ಕೆ ಕರ್ನಾಟಕ ನೆಲದಲ್ಲಿ ಮುನ್ನುಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಸಂವಿಧಾನ, ಮತದಾನದ ಹಕ್ಕು ರಕ್ಷಣೆಗೆ ರಾಹುಲ್ ಗಾಂಧಿ ಅವರು ದಿಟ್ಟ ಹೋರಾಟ ಆರಂಭಿಸಿದ್ದಾರೆ. ಅದಕ್ಕೆ ನಮ್ಮೆಲ್ಲರ ಒಕ್ಕೊರಲ ಬೆಂಬಲವಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕೇಂದ್ರ ಚುನಾವಣೆ ಆಯೋಗ ಪ್ರಾಯೋಜಿತ ಮತ ಅಕ್ರಮದ ವಿರುದ್ಧ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ‘ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ’ ಪ್ರತಿಭಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಇದೊಂದು ಐತಿಹಾಸಿಕ ಹೋರಾಟ. ಮಲ್ಲಿಕಾರ್ಜುನ ಖರ್ಗೆ ಅವರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಈಗ ಎಐಸಿಸಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುವ ಎತ್ತರಕ್ಕೆ ಬೆಳೆದಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದಾರೆ. ರಾಹುಲ್ ಗಾಂಧಿ ಅವರು ದೇಶದ ಸಂವಿಧಾನ ರಕ್ಷಣೆಗೆ ನಮ್ಮ ಮತ, ನಮ್ಮ ಹಕ್ಕು, ರಕ್ಷಣೆಗೆ ದೊಡ್ಡ ಸಂದೇಶ ರವಾನಿಸಿದ್ದಾರೆ. ರಾಹುಲ್ ಗಾಂಧಿ ಅವರು ದೇಶದ ಪರವಾಗಿ ದಿಟ್ಟ ಹೋರಾಟ ಆರಂಭಿಸಿದ್ದಾರೆ. ದೇಶಾದ್ಯಂತ ಮತ ಅಕ್ರಮ ಬಯಲಿಗೆಳೆಯಲು ಕರ್ನಾಟಕದಲ್ಲಿ ಮುನ್ನುಡಿ ಬರೆಯುತ್ತಿದ್ದಾರೆ ಎಂದು ತಿಳಿಸಿದರು.

ಇತ್ತೀಚೆಗೆ ದೆಹಲಿಯಲ್ಲಿ ನಡೆದ ಎಐಸಿಸಿ ಮಾನವ ಹಕ್ಕು ವಿಭಾಗದ ಸಭೆಯಲ್ಲಿ ರಾಹುಲ್ ಗಾಂಧಿ ಅವರು, ಸಂವಿಧಾನ ಉಳಿಸಿ ಪ್ರಜಾಪ್ರಭುತ್ವ ರಕ್ಷಣೆ ಮಾಡಲು, ಆಸ್ಪತ್ರೆಗಳಲ್ಲಿ ಬ್ಲಡ್ ಬ್ಯಾಂಕ್ ಇರುವಂತೆ ಪ್ರತಿ ಕ್ಷೇತ್ರದಲ್ಲಿ ಲೀಗಲ್ ಬ್ಯಾಂಕ್ ಸ್ಥಾಪನೆ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ. ಅವರ ಸೂಚನೆಗೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read