HomeKarnatakaಸಚಿವ ಡಿ.ಸುಧಾಕರ್ ಅಂತಿಮ ದರ್ಶನ ಪಡೆದು ಬಿಕ್ಕಿ ಬಿಕ್ಕಿ ಅತ್ತ ಡಿಸಿಎಂ ಡಿ.ಕೆ.ಶಿವಕುಮಾರ್

ಸಚಿವ ಡಿ.ಸುಧಾಕರ್ ಅಂತಿಮ ದರ್ಶನ ಪಡೆದು ಬಿಕ್ಕಿ ಬಿಕ್ಕಿ ಅತ್ತ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಕಣ್ಣೀರಿಟ್ಟಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಸಚಿವ ಡಿ.ಸುಧಾಕರ್ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್, ಸುಧಾಕರ್ ಅವರನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಇದಕ್ಕೂ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಡಿ.ಸುಧಾಕರ್ ಅವರು ಭದ್ರ ಮೇಲ್ದಂಡೆ ಯೋಜನೆ ಜಾರಿಗೆ ಹೋರಾಟ ಮಾಡಿದ್ದರು. ಅವರ ಸ್ಮರಣಾರ್ಥ ನೀರಾವರಿ ಯೋಜನೆಗೆ ಸುಧಾಕರ್ ಅವರ ಹೆಸರಿಡಲು ಆಲೋಚನೆ ಮಾಡಲಾಗುವುದು ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ನಮ್ಮ ಪಾಲಿಗೆ ಬಹಳ ದುಃಖದ ದಿನ. ನನ್ನ ಆಪ್ತಮಿತ್ರ ಹಾಗೂ ನಮ್ಮ ಸರ್ಕಾರದ ಸಚಿವರಾದ ಡಿ. ಸುಧಾಕರ್ ಅವರು ನಮ್ಮನ್ನು ಅಗಲಿದ್ದಾರೆ. ಕಳೆದ ಒಂದು ತಿಂಗಳ ಹಿಂದೆ ಮಂಡಿ ನೋವಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸೇರಿದ್ದರು. ಶಸ್ತ್ರಚಿಕಿತ್ಸೆ ನಂತರ ಶ್ವಾಸಕೋಶ ಸೋಂಕಿಗೆ ಒಳಗಾಗಿದ್ದರು, ಪ್ರಜ್ಞೆ ಹೋಗಿತ್ತು. ಈ ಮಧ್ಯೆ ಕೆಲ ದಿನಗಳ ಕಾಲ ಅವರಿಗೆ ಪ್ರಜ್ಞೆ ಮರಳಿತ್ತು. ಹೀಗಾಗಿ ಅವರು ಗುಣಮುಖರಾಗಿ ಮರಳುತ್ತಾರೆ ಎಂಬ ವಿಶ್ವಾಸವಿತ್ತು. ವಿದೇಶದಿಂದಲೂ ವೈದ್ಯರನ್ನು ಕರೆಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಇಂದು ಬೆಳಗಿನ ಜಾವ 3.15ಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ. ಪ್ರತಿ ನಿತ್ಯ ನಾನು ಅವರ ಕುಟುಂಬ ಸದಸ್ಯರ ಜತೆ ಸಂಪರ್ಕದಲ್ಲಿದ್ದು, ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆಯುತ್ತಿದ್ದೆ ಎಂದರು.

ಇಂದು ಅವರ ಪಾರ್ಥಿವ ಶರೀರವನ್ನು ಹಿರಿಯೂರಿಗೆ ತೆಗೆದುಕೊಂಡು ಹೋಗಲಾಗುತ್ತಿದ್ದು, ಸಂಜೆ ನಂತರ ಚಳ್ಳಕೆರೆಗೆ ತೆಗೆದುಕೊಂಡು ಹೋಗಲಾಗುವುದು. ನಾನು ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ಮಾಡಿದ್ದು ನಾಳೆ ಸಂಜೆ 3 ಗಂಟೆ ನಂತರ ಜೈನ ಧರ್ಮದ ವಿಧಿ ವಿಧಾನಗಳ ಪ್ರಕಾರ ಅಂತಿಮ ಕಾರ್ಯ ನಡೆಸಲಾಗುವುದು. ಸರ್ಕಾರದ ಗೌರವದೊಂದಿಗೆ ಅವರಿಗೆ ಅಂತಿಮ ನಮನ ಸಲ್ಲಿಸಲಾಗುವುದು” ಎಂದು ತಿಳಿದರು.

ನಾಳೆ ಅವರ ಅಂತಿಮ ಸಂಸ್ಕಾರ ಕಾರ್ಯದಲ್ಲಿ ಭಾಗವಹಿಸುತ್ತೇನೆ. ಅವರು ನನ್ನ ಜೊತೆ ಬಹಳ ಒಡನಾಟ ಇಟ್ಟುಕೊಂಡಿದ್ದರು. ಬಹಳ ಚಿಕ್ಕ ವಯಸ್ಸು, ಆರೋಗ್ಯವಾಗಿದ್ದರು. ಎಸ್ ಎಂ ಕೃಷ್ಣ ಅವರ ಕಾಲದಲ್ಲಿ ರಂಗನಾಥ್ ಅವರ ಕ್ಷೇತ್ರದಲ್ಲಿ ಟಿಕೆಟ್ ಕೊಡಿಸಿದ್ದೆ. ನನ್ನ ಜೊತೆ ಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಅವರಿಗೆ ಯೋಜನಾ ಮತ್ತು ಮುಜರಾಯಿ ಇಲಾಖೆ ನೀಡಲಾಗಿತ್ತು. ಅವರ ಜೊತೆ ಚರ್ಚೆ ಮಾಡಿ ಮುಜರಾಯಿ ಇಲಾಖೆಯನ್ನು ರಾಮಲಿಂಗಾರೆಡ್ಡಿ ಅವರಿಗೆ ನೀಡಲಾಯಿತು. ಸಿಎಂ ಇದಕ್ಕೆ ಅನುಮತಿ ನೀಡಿದ್ದರು ಎಂದು ಹೇಳಿದರು.

ಭಾರತ ಜೋಡೋ ಯಾತ್ರೆ ವೇಳೆ ಐದು ದಿನದ ಜವಾಬ್ದಾರಿಯನ್ನು ಅವರೇ ವಹಿಸಿದ್ದರು. ಅವರ ಅಗಲಿಕೆ ವಿಚಾರವನ್ನು ರಾಹುಲ್ ಗಾಂಧಿ ಅವರ ಗಮನಕ್ಕೆ ತರಲಾಗಿದೆ. ರಾಹುಲ್ ಗಾಂಧಿ ಅವರು ಸುಧಾಕರ್ ಅವರ ಕುಟುಂಬದ ಸದಸ್ಯರ ಜೊತೆಗೆ ಮಾತನಾಡಲಿದ್ದಾರೆ ಎಂದರು.

ಸುಧಾಕರ್ ಅವರ ಪಕ್ಷ ನಿಷ್ಠೆ, ತ್ಯಾಗ ಸ್ಮರಿಸುತ್ತೇವೆ. ಶಾಂತಿ ಕಾಪಾಡಬೇಕು ಎಂದು ನಮ್ಮ ಕಾರ್ಯಕರ್ತರು ಹಾಗೂ ಮುಖಂಡರಿಗೆ ಮನವಿ ಮಾಡುತ್ತೇವೆ. ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು. ಹಾಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದರು. ಅವರ ಅಗಲಿಕೆ ನಮ್ಮ ಪಕ್ಷಕ್ಕೆ ದೊಡ್ಡ ನಷ್ಟವಾಗಿದೆ. ಈ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವೆ ಎಂದರು.

ಭದ್ರಾ ಯೋಜನೆ ಪೂರ್ಣಗೊಳಿಸಿ ಅದಕ್ಕೆ ಚಾಲನೆ ನೀಡಬೇಕು ಎಂದು ಬಹಳ ಆಸೆ ಇಟ್ಟುಕೊಂಡಿದ್ದರು. ಈ ಯೋಜನೆಗಾಗಿ ಸಾಕಷ್ಟು ಹೋರಾಟ ಮಾಡಿದ್ದರು. ಅವರ ಅಧ್ಯಕ್ಷತೆಯಲ್ಲಿ ಈ ಯೋಜನೆ ಉದ್ಘಾಟನೆ ಮಾಡಬೇಕು ಎಂದು ಚಿಂತಿಸಿದ್ದೆವು. ಕ್ಷೇತ್ರ ಹಾಗೂ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಆಸಕ್ತಿ ಹೊಂದಿದ್ದರು. ಎಲ್ಲಾ ವರ್ಗದ ಜನರಿಗೆ ನ್ಯಾಯ ಒದಗಿಸಿಕೊಡುತ್ತಿದ್ದರು. ಪಕ್ಷದ ಸದಸ್ಯತ್ವ ಅಭಿಯಾನದಲ್ಲಿ ಅತಿ ಹೆಚ್ಚು ನೋಂದಣಿ ಮಾಡಿಸಿದ ಕೀರ್ತಿ ಸುಧಾಕರ್ ಅವರಿಗೆ ಸಲ್ಲುತ್ತದೆ. ರಾಹುಲ್ ಗಾಂಧಿ ಅವರ ಭಾರತ ಜೋಡೋ ಸಂದರ್ಭದಲ್ಲಿ ಮಳೆ ಬಂದು ಅವ್ಯವಸ್ಥೆಯಾದಾಗ ಕಾರ್ಯಕ್ರಮ ಯಶಸ್ಸಿಗೆ ಅವರು ಹಾಗೂ ಅವರ ಕಾರ್ಯಕರ್ತರು ಪಟ್ಟ ಕಷ್ಟ ನೆನೆಯುತ್ತೇವೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular