HomeKarnatakaBIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಕಪ್ಪುಬಟ್ಟೆ ಪ್ರದರ್ಶಿಸಿ ಪ್ರತಿಭಟಿಸಿದ ಬಂಜಾರಾ ಸಮುದಾಯ

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಕಪ್ಪುಬಟ್ಟೆ ಪ್ರದರ್ಶಿಸಿ ಪ್ರತಿಭಟಿಸಿದ ಬಂಜಾರಾ ಸಮುದಾಯ

ದಾವಣಗೆರೆ: ದಾವಣಗೆರೆಯ ಭಾಯಾಗಾಡ್ ನಲ್ಲಿ ನಡೆಯುತ್ತಿರುವ ಸಂತ ಸೇವಾಲಾಲ್ ಅವರ 287ನೇ ಜಯಂತಿಗೆ ಆಗಮಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕಪ್ಪುಬಟ್ಟೆ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಬಂಜಾರ ಸಮುದಾಯದ ಜನರು ಕಪ್ಪು ಬಟ್ಟೆ ಪ್ರದರ್ಶಿಸಿದರು. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಒಳಮೀಸಲಾತಿಯಿಂದ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್ ವೇದಿಕೆ ಆಗಮಿಸುತ್ತಿದ್ದಂತೆ ಸಭಾಂಗಣದಲ್ಲಿ ನೆರೆದಿದ್ದ ಬಂಜಾರಾ ಸಮುದಾಯದ ಯುವಕರು ಎದ್ದು ನಿಂತು ಕಪ್ಪುಬಟ್ಟೆ ಪ್ರದರ್ಶಿಸಿದರು. ರಾಜ್ಯ ಸರ್ಕಾರದ ಒಳ ಮೀಸಲಾತಿ ನೀತಿಯಿಂದ ನಮ್ಮ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಘೋಷಣೆ ಕೂಗಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಳಮೀಸಲಾತಿ ವಿರೋಧಿಸುವ ಹಲವು ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು. ಈ ವೇಳೆ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ತಕ್ಷಣ ಪೊಲೀಸರು ಮಧ್ಯಪ್ರದೇಶಿಸಿ ವಾತಾವರಣ ತಿಳಿಗೊಳಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular