ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನವೆಂಬರ್ ಕ್ರಾಂತಿ, ನಾಯಕತ್ವ ಬದಲಾವಣೆ, ಸಚಿವ ಸಂಪುಟ ಪುನಾರಚನೆ ಕುರಿತು ಭಾರಿ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಇಂದು ಮಧ್ಯಾಹ್ನ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಸಂಜೆ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ. ಬಳಿಕ ಇಂದು ರಾತ್ರಿಯೇ ಬೆಂಗಳೂರಿಗೆ ವಾಪಾಸ್ ಆಗಲಿದ್ದಾರೆ ಎಂದು ತಿಳಿದುಬಂದಿದೆ.
ಸಚಿವ ಸಂಪುಟ ಪುನಾರಚನೆ ಚರ್ಚೆ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ದಿಢೀರ್ ದೆಹಲಿ ಪ್ರಯಾಣ ತೀವ್ರ ಕುತೂಹಲ ಮೂಡಿಸಿದೆ.
