HomeLatest NewsBIG NEWS: ದೆಹಲಿಯಲ್ಲಿ ಯಾರನ್ನು ಭೇಟಿ ಮಾಡುತ್ತೇನೆ ಎಂದು ಹೇಳಲು ಆಗದು ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

BIG NEWS: ದೆಹಲಿಯಲ್ಲಿ ಯಾರನ್ನು ಭೇಟಿ ಮಾಡುತ್ತೇನೆ ಎಂದು ಹೇಳಲು ಆಗದು ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

ನವದೆಹಲಿ: ದೆಹಲಿಯಲ್ಲಿ ನಾನು ಯಾರನ್ನು ಭೇಟಿ ಮಾಡುತ್ತೇನೆ ಎಂದು ಬಹಿರಂಗವಾಗಿ ಹೇಳಲು ಆಗುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ದೆಹಲಿಗೆ ಬಂದ ಮೇಲೆ ನಾನು ಎಲ್ಲರನ್ನು ಭೇಟಿ ಮಾಡುತ್ತೇನೆ. ನೀವುಗಳು (ಮಾಧ್ಯಮಗಳು), ಡಿ.ಕೆ ದೆಹಲಿಗೆ ಹೋದರೂ ನಾಯಕರು ಸಮಯ ನೀಡಿಲ್ಲ, ಕಾಯುತ್ತಾ ಕೂತಿದ್ದಾರೆ ಎಂದು ವರದಿ ಮಾಡುತ್ತೀರಲ್ಲಾ, ಹಾಗೇ ಕಾಯುತ್ತಾ ಕೂತಿರುವೆ ಎಂದರು.

ಪುಣೆಯಲ್ಲಿರುವ ನನ್ನ ಸ್ನೇಹಿತರ ಮನೆ ಮದುವೆ ಕಾರ್ಯಕ್ರಮವಿತ್ತು. ಹೀಗಾಗಿ ನಿನ್ನೆ ದೆಹಲಿಗೆ ಬಂದಿದ್ದೆ. ಇಂದು ಅಸ್ಸಾಂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರನ್ನು ಭೇಟಿ ಮಾಡಿದ್ದೆ. ಇಂದು ಅನೇಕ ಸಭೆಗಳಿವೆ. ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮವಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಳೆಗೆ ನೀವು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರ್ಣಗೊಳ್ಳುತ್ತಿರುವ ಬಗ್ಗೆ ಕೇಳಿದಾಗ, ನಾಳೆಗೆ ನಾನು ಕೆಪಿಸಿಸಿ ಅಧ್ಯಕ್ಷನಾಗಿ 6 ವರ್ಷ ಪೂರ್ಣಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರಿಗೆ ಭೋಜನಕೂಟ ಹಮ್ಮಿಕೊಂಡಿದ್ದೇನೆ. ಮತ್ತೊಂದು ದಿನ ನಮ್ಮ ಪರಾಜಿತ ಅಭ್ಯರ್ಥಿಗಳು ಮತ್ತು ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಭೋಜನಕೂಟ ಹಮ್ಮಿಕೊಳ್ಳಲಾಗುವುದು. ಈಗ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಾಸಕರಿಗೆ ಭೋಜನಕೂಟ ಇಟ್ಟುಕೊಂಡಿದ್ದೇನೆ ಎಂದು ತಿಳಿಸಿದರು.

ದೆಹಲಿ ಭೇಟಿ ಬಗ್ಗೆ ಯಾವ ವಿಭಿನ್ನ ಚರ್ಚೆನೂ ಬೇಡ. ನಾಳೆ (ಮಂಗಳವಾರ) ಭೋಜನಕೂಟವಿದೆ, ನಾಡಿದ್ದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಇದೆ ಎಂದು ತಿಳಿಸಿದರು.

ಅಸ್ಸಾಂ ಚುನಾವಣೆಗೆ 43 ಅಭ್ಯರ್ಥಿಗಳ ಕಾಂಗ್ರೆಸ್ ಪಟ್ಟಿ ಈಗಾಗಲೇ ಬಿಡುಗಡೆಯಾಗಿದ್ದು, ಇಂದು ಮತ್ತೊಂದು ಸ್ಕ್ರೀನಿಂಗ್ ಸಮಿತಿ ಸಭೆ ಇದೆ. ಈ ಸಮಿತಿಯಲ್ಲಿ ನಾನು ಇಲ್ಲ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular