ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ ಕಸರತ್ತು ಆರಂಭವಾಗಿದೆ. ಒಂದೆಡೆ ಕಾಂಗ್ರೆಸ್ ನಲ್ಲಿ ಮಂತ್ರಿ ಸ್ಥಾನ ಕೈತಪ್ಪಿದ್ದಕ್ಕೆ ಬೇಸರಗೊಂಡಿರುವ ಶಾಸಕರ ಮನವೊಲಿಕೆ ಯತ್ನ ನಡೆದಿದೆ. ಇದರ ನಡುವೆ ನೂತನ ಸಚಿವರಿಗೆ ಯಾರ್ಗೆ ಯಾವ ಖಾತೆ ನೀಡಬೇಕು ಎಂಬ ಬಗ್ಗೆ ಚರ್ಚೆ ಶುರುವಾಗಿದೆ.
ಖಾತೆ ಹಂಚಿಕೆ ವಿಚಾರವಾಗಿ ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮತ್ತೆ ದೆಹಲಿಗೆ ಯೆರಳಲಿದ್ದಾರೆ. ಇಂದು ಸಂಜೆ ಅಥವಾ ನಾಳೆ ಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ಪ್ರಯಾಣಿಸಲಿದ್ದು, ಹೈಕಮಾಂಡ್ ನಾಯಕರ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ನೂತನ ಮಂತ್ರಿಗಳಿಗೆ ಯಾರಿಗೆ ಯಾವ ಖಾತೆ ಸಿಗಲಿದೆ ಎಂಬುದನ್ನು ಕಾದುನೋಡಬೇಕಿದೆ.

