HomeLatest Newsದೆಹಲಿಯಲ್ಲಿ ಇದೇ ಮೊದಲ ಬಾರಿಗೆ ಸಿಎಂ ಡಿ.ಕೆ.ಶಿವಕುಮಾರ್ ಗೆ ವಿಶೇಷ ಭದ್ರತೆ : SP ಸೇರಿ...

ದೆಹಲಿಯಲ್ಲಿ ಇದೇ ಮೊದಲ ಬಾರಿಗೆ ಸಿಎಂ ಡಿ.ಕೆ.ಶಿವಕುಮಾರ್ ಗೆ ವಿಶೇಷ ಭದ್ರತೆ : SP ಸೇರಿ ಹಲವು ಹಂತದ ಅಧಿಕಾರಿಗಳ ನಿಯೋಜನೆ

ನವದೆಹಲಿ: ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸಲು ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಭಾರಿ ಭದ್ರತೆ ಒದಗಿಸಲಾಗಿದೆ.

ಸಂಸದರ ಸಭೆ, ಸಂಪುಟ ವಿಸ್ತರಣೆ ವಿಚಾರವಾಗಿ ಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ಭೇಟಿ ನೀಡಿದ್ದಾರೆ. ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ದೊಡ್ಡ ಪ್ರಮಾಣದಲ್ಲಿ ವಿಶೇಷ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ರಾಜ್ಯದ ಮುಖ್ಯಮಂತ್ರಿಯೊಬ್ಬರಿಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರಿ ಭದ್ರತೆಯ ವ್ಯವಸ್ಥೆ ಕಲ್ಪಿಸಿರುವುದು ಇದೇ ಮೊದಲು.

ಬೆಂಗಳೂರಿನಿಂದ ಆಗಮಿಸಿದ 7 ಮಂದಿ ಪೊಲೀಸರ ವಿಶೇಷ ತಂಡವು ಸಿಎಂ ಡಿ.ಕೆ.ಶಿವಕುಮಾರ್ ಭದ್ರತೆಯ ಜವಾಬ್ದಾರಿ ವಹಿಸಿಕೊಂಡಿದ್ದು, ಎಸ್‌ಪಿ, ಇನ್ಸ್‌ಪೆಕ್ಟರ್‌ ಸೇರಿದಂತೆ ಹಲವು ಹಂತದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭದ್ರತೆಯೊಂದಿಗೆ ದೆಹಲಿ ಕರ್ನಾಟಕ ಭವನಕ್ಕೆ ಆಗಮಿಸಿದ ಸಿಎಂ ಡಿಲ್.ಕೆ.ಶಿವಕುಮಾರ್ ಸಂಸದರ ಸಭೆಗೆ ಮುನ್ನ ಪೂರ್ವಭಾವಿ ಸಭೆ ನಡೆಸಿದರು. ರಾಜ್ಯದ ಜಲ ಹಿತಾಸಕ್ತಿ, ನ್ಯಾಯಮಂಡಳಿ ವಿಚಾರಗಳು ಹಾಗೂ ಮುಂದಿನ ಕಾರ್ಯತಂತ್ರದ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಕರ್ನಾಟಕಕ್ಕೆ ಸಂಬಂಧಿಸಿದ ಜಲ ವಿವಾದಗಳ ಕುರಿತೂ ಸಿಎಂ ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular