HomeLatest NewsBIG NEWS: ಕರ್ನಾಟಕದಲ್ಲಿ ಕೈ ಹಿಡಿದ ಗ್ಯಾರಂಟಿ ಯೋಜನೆ: ಕೇರಳದಲ್ಲಿ ಅಧಿಕಾರ ನಿರೀಕ್ಷಿತ ಎಂದ ಡಿಸಿಎಂ...

BIG NEWS: ಕರ್ನಾಟಕದಲ್ಲಿ ಕೈ ಹಿಡಿದ ಗ್ಯಾರಂಟಿ ಯೋಜನೆ: ಕೇರಳದಲ್ಲಿ ಅಧಿಕಾರ ನಿರೀಕ್ಷಿತ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಜೊತೆಗೆ ಕರ್ನಾಟಕದ ಎರಡು ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಕೂಡ ಹೊರಬಿದ್ದಿದೆ. ಚುನಾವಣಾ ಫಲಿತಾಂಶದ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ರಾಅಜ್ಯದ ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದೆ ಎಂದಿದ್ದಾರೆ.

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿದಿವೆ. ಜನರ ಕಷ್ಟಕ್ಕೆ ನಮ್ಮ ಸರ್ಕಾರ ಸ್ಪಂದಿಸಿದೆ. ಹೀಗಾಗಿ ಕರ್ನಾಟಕ ಉಪಚುನಾವಣೆಗಳಲ್ಲಿ ಉತ್ತಮ ಫಲಿತಾಂಶ ಬಂದಿದೆ. ಬೇರೆ ರಾಜ್ಯಗಳ ಪೈಕಿ ಕೇರಳದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎನ್ನುವ ವಿಶ್ವಾಸವಿತ್ತು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾವಣಗೆರೆ ದಕ್ಷಿಣದಲ್ಲಿ ಗೆಲುವಿನ ಅಂತರ 25-30 ಸಾವಿರಕ್ಕಿಂತ ಕಡಿಮೆ ಆಗಿರುವ ಬಗ್ಗೆ ಸಾಕಷ್ಟು ಗೊಂದಲ ಆದಮೇಲೆ 25-30 ಸಾವಿರ ಅಂತರದ ಗೆಲುವು ಸಿಗುವುದಿಲ್ಲ ಎಂಬುದು ಗೊತ್ತಿತ್ತು. ಆದರೆ ಆರಾಮವಾಗಿ ಗೆಲ್ಲುತೇವೆ ಎಂದು ಗೊತ್ತಿತ್ತು. ಎಸ್ ಡಿಪಿಐನಿಂದ ಅಪಾಯವಾಗಿದೆ. ನಾವೆಂದೂ ಅದನ್ನು ಹಗುರವಾಗಿ ಪರಿಗಣಿಸಿರಲಿಲ್ಲ ಎಂದರು.

ಅದರ ಬಗ್ಗೆ ಮುಖ್ಯಮಂತ್ರಿಗಳು ಈಗಾಗಲೇ ಮಾತನಾಡಿದ್ದಾರೆ. ನಾನೇನು ಮಾತನಾಡಲು ಹೋಗುವುದಿಲ್ಲ. ಎಸ್ ಡಿಪಿಐ ಅನ್ನು ಹಗುರವಾಗಿ ನಾವು ಪರಿಗಣಿಸಿರಲಿಲ್ಲ. ಅದೂ ಸಹ ರಾಜಕೀಯ ಪಕ್ಷ. ಅವರು ಅಲ್ಪಸಂಖ್ಯಾತರ ಮತ ತೆಗೆದುಕೊಂಡರು ಎಂದರು.

ಪಂಚ ರಾಜ್ಯಗಳ ಚುನಾವಣೆ ಫಲಿತಾಂಶವು ನಮ್ಮ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಒಂದಷ್ಟು ಜನಕ್ಕೆ ಸಂತೋಷ, ಒಂದಷ್ಟು ಜನಕ್ಕೆ ಬೇಜಾರು ಆಗಬಹುದು. ಡಬಲ್ ಎಂಜಿನ್ ಸರ್ಕಾರ ಇದ್ದಾಗಲೇ ಅವರಿಗೆ ಏನೂ ಮಾಡಲಿಲ್ಲ ಎಂದು ಹೇಳಿದರು.

ಕೇರಳದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಾವು ಗೆದ್ದಿದ್ದೆವು. ಎಲ್ ಡಿಎಫ್ 10 ವರ್ಷಗಳ ಕಾಲ ಆಡಳಿತ ನಡೆಸಿದೆ. ಅದಕ್ಕೆ ಜನ ಬದಲಾವಣೆ ಬೇಕು ಎಂದು ಫಲಿತಾಂಶ ನೀಡಿದ್ದಾರೆ. ಪ್ರಚಾರಕ್ಕೂ ಹೋದಾಗಲೂ ಜನ ನಮ್ಮ ಬಗ್ಗೆ ವಿಶ್ವಾಸ ವ್ಯಕ್ತಪಡಿಸುತ್ತಿದ್ದರು ಎಂದರು.

ತಮಿಳುನಾಡಿನದ್ದು ಅಚ್ಚರಿಯ ಫಲಿತಾಂಶ. ಅಲ್ಲಿ ಹೊಸ ಯುಗ ಪ್ರಾರಂಭವಾಗಿದೆ. ಜನರ ನಾಡಿಮಿಡಿತವನ್ನು ನಾವು ಗ್ರಹಿಸಲು ಆಗಲಿಲ್ಲ. ಸ್ಥಳೀಯ ನಾಯಕರು ಈ ಬಗ್ಗೆ ಹೇಳಿದ್ದರು. 40 ವರ್ಷಗಳ ರಾಜಕೀಯದಲ್ಲಿ ಸಂಬಂಧ, ನೆಂಟಸ್ತನ ಬಿಡಲು ಆಗುತ್ತದೆಯೇ ಎಂದರು.

ತಮಿಳುನಾಡಿನಲ್ಲಿ ಸೆಲೆಬ್ರಿಟಿ ಅನ್ನುವ ಕಾರಣಕ್ಕೆ ವಿಜಯ್ ಅವರುಗೆ ಜನ ಮತ ಹಾಕಿರಬಹುದು. ಶೇ 30-40 ರಷ್ಟು ಮತ ಹೋಗಬಹುದು ಎಂದು ಕೊಂಡಿದ್ದೆವು. ಆದರೆ ಅದಕ್ಕೂ ಹೆಚ್ಚು ಮತ ಅವರಿಗೆ ಹೋಗಿದೆ ಎಂದರು.

ಅಸ್ಸಾಂ ರಾಜ್ಯದಲ್ಲಿ ನಿರೀಕ್ಷಿತ ಫಲಿತಾಂಶ ಬಂದಿಲ್ಲ. ನಾವು 50- 60 ಸ್ಥಾನ ಬರುತ್ತೇವೆ ಎಂದು ಕೊಂಡಿದ್ದೆವು. ಅಲ್ಲಿನ ಸ್ಥಳೀಯ ನಾಯಕರೂ 50 ಸ್ಥಾನಗಳನ್ನು ಮುಟ್ಟುತ್ತೇವೆ ಎಂದು ಹೇಳಿದ್ದರು ಎಂದರು.

ಅಸ್ಸಾಂ ನಲ್ಲಿ ಸೋಲಿಗೆ ಕಾರಣ ವಿಚಾರವಾಗಿ ಕ್ಷೇತ್ರ ಮರುವಿಂಗಡಣೆ ಮಾಡುವಾಗ ಅಲ್ಪಸಂಖ್ಯಾತರು ಒಂದೇ ಕಡೆ ಬರುವಂತೆ ಮಾಡಿದ್ದಾರೆ. ಉಪಾಯವಾಗಿಯೇ ಇದನ್ನು ಮಾಡಲಾಗಿದೆ ಎಂದರು.

ಪಶ್ಚಿಮ ಬಂಗಾಳದಲ್ಲಿ ವ್ಯವಸ್ಥಿತವಾಗಿ ಅಧಿಕಾರ ದುರುಪಯೋಗವಾಗಿದೆ. ಎಲೆಕ್ಷನ್ ಕಮಿಷನ್ ಅನ್ನು ಎಷ್ಟು ದುರುಪಯೋಗ ಪಡಿಸಿಕೊಳ್ಳಬೇಕೋ ಅಷ್ಟು ದುರುಪಯೋಗ ಮಾಡಿಕೊಂಡಿದ್ದಾರೆ. ಈ ಹಿಂದೆ ಬಹಳ ಪ್ರಯತ್ನ ಮಾಡಿದರು. ಈಗ ಎರಡು ಲಕ್ಷಕ್ಕೂ ಹೆಚ್ಚು ಮತಗಳನ್ನು ಅಳಿಸಿ ಹಾಕಿದ ಕಾರಣಕ್ಕೆ ಬದಲಾವಣೆಯಾಗಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular