HomeLatest NewsBREAKING: ಸಿಎಲ್ ಪಿ ಸಭೆಗೂ ಮುನ್ನವೇ ರಾಜ್ಯಪಾಲರ ಭೇಟಿಗೆ ಮುಂದಾದ ಡಿ.ಕೆ.ಶಿವಕುಮಾರ್

BREAKING: ಸಿಎಲ್ ಪಿ ಸಭೆಗೂ ಮುನ್ನವೇ ರಾಜ್ಯಪಾಲರ ಭೇಟಿಗೆ ಮುಂದಾದ ಡಿ.ಕೆ.ಶಿವಕುಮಾರ್

ಬೆಂಗಳೂರು: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. ಡಿ.ಕೆ.ಶಿವಕುಮಾರ್ ಅವರೇ ಮುಂದಿನ ಮುಖ್ಯಮಂತ್ರಿ ಎಂಬುದು ಬಹುತೇಕ ಖಚಿತವಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆ(CLP)ಯಲ್ಲಿ ಹೆಸರು ಅಧಿಕೃತವಾಗಿ ಘೋಷಣೆಯಾಗುವುದು ಮಾತ್ರ ಬಾಕಿಯಿದೆ. ಈ ನಡುವೆ ಡಿ.ಕೆ.ಶಿವಕುಮಾರ್ ಸಿಎಲ್ ಪಿ ಸಭೆಗೂ ಮುನ್ನವೇ ರಾಜ್ಯಪಾಲರ ಭೇಟಿಗೆ ಮುಂದಾಗಿದ್ದಾರೆ.

ಶಾಸಕಾಂಗ ಪಕ್ಷದ ಸಭೆಗೂ ಮುನ್ನವೇ ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದು, ಇಂದು ಬೆಳಗ್ಗೆ 10:30ಕ್ಕೆ ಲೋಕಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ.

ಸಿಎಲ್ ಪಿ ಸಭೆ ಸಂಜೆ 4 ಗಂಟೆಗೆ ಆರಂಭವಾಗಲಿದ್ದು, ಸಂಜೆ ೬ ಗಂಟೆಯವರೆಗೂ ನಡೆಯಲಿದೆ. ಮಧ್ಯಾಹ್ನ 1 ಗಂಟೆಯ ನಂತರ ರಾಜ್ಯಪಾಲರು ಧರ್ಮಸ್ಥಳಕ್ಕೆ ತೆರಳಲಿರುವ ಕಾರಣ, ಅವರು ಸಿಗುವುದಿಲ್ಲ. ಸಂಜೆ ಕೂಡ ರಾಜ್ಯಪಾಲರು ಅನುಪಸ್ಥಿತರಿರಲಿದ್ದಾರೆ. ಹಾಗಾಗಿ ಡಿ.ಕೆ.ಶಿವಕುಮಾರ್ ಸಹೋದರರು ಸಿಎಲ್ ಪಿ ಸಭೆಗಿಂತ ಮುಂಚಿತವಾಗಿಯೇ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular