ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮೀ ಯೋಜನೆ ಹಾಗೂ ಗೃಹ ಜ್ಯೋತಿ ಯೋಜನೆಯನ್ನು ಪರಿಷ್ಕರಣೆ ಮಾಡಲು ಮುಂದಾಗಿದೆ. ಫಲಾನುಭವಿಗಳಲ್ಲದವರ ಖಾತೆಗಳಿಗೂ ಗೃಹಲಕ್ಷ್ಮೀ ಹಣ ಹೋಗುತ್ತಿದೆ ಎಂವ ಆರೋಪ ಕೇಳಿಬಂದಿದೆ. ಅಲ್ಲದೇ ಗೃಹ ಜ್ಯೋತಿ ಯೋಜನೆಯಲ್ಲಿಯೂ ಕೆಲ ಕಳ್ಳಾಟ ನಡೆಯುತ್ತಿದೆ ಎಂಬ ಆರೋಪವಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಮುಂದಾಗಿದೆ ಎನ್ನಲಾಗಿದೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಕೆಲವು ಗ್ಯಾರಂಟಿ ಫಲಾನುಭವಿಗಳು ಮೃತಪಟ್ಟಿದ್ದು, ಸುಮಾರು 100 ಕೋಟಿಯಷ್ಟು ಹಣ ಬೇರೆಯವರಿಗೆ ಹೋಗಿ ದುರ್ಬಳಕೆಯಾಗಿದೆ. ಇನ್ನು ಬೇರೆಯವರ ದೂರವಾಣಿ ಸಂಖ್ಯೆ ಕೊಟ್ಟಿರುವುದರಿಂದ ಸರಿಯಾದ ಫಲಾನುಭವಿಗಳಿಗೆ ಯೋಜನೆ ತಲುಪುತ್ತಿದೆಯೇ, ಇಲ್ಲವೇ ಎಂದು ತಿಳಿಯಬೇಕಿದೆ. ಹೀಗಾಗಿ ಫಲಾನುಭವಿಗಳ ದಾಖಲೆ ಸಂಗ್ರಹಿಸುವ ಬಗ್ಗೆ ಚರ್ಚೆ ಮಾಡುವ ಬಗ್ಗೆ ಸಲಹೆ ಬಂದಿದೆ. ಪ್ರತಿ ತಾಲ್ಲೂಕಿನಲ್ಲಿ ಇದನ್ನು ಪರಿಶೀಲನೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.
2 ತಿಂಗಳಿನಿಂದ ಅನ್ನಭಾಗ್ಯ ಅಕ್ಕಿ ಸರಿಯಾಗಿ ತಲುಪುತ್ತಿಲ್ಲ ಎಂಬ ಬಗ್ಗೆ ಕೇಂದ್ರ ಸರ್ಕಾರ ಅಕ್ಕಿ ಬಿಡುಗಡೆ ಮಾಡುತ್ತಿಲ್ಲ. ಕೇವಲ ಕರ್ನಾಟಕ ಮಾತ್ರವಲ್ಲ, ನಮ್ಮ ಸರ್ಕಾರ ಇರುವ ರಾಜ್ಯಗಳಲ್ಲಿ ಈ ರೀತಿ ಮಾಡುತ್ತಿದ್ದಾರೆ ಎಂದು ಹೇಳಿದರು.

