HomeLive NewsBIG NEWS: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಆಶಿರ್ವಾದ ಪಡೆದು, ಪದಗ್ರಹಣ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಡಿ.ಕೆ.ಶಿವಕುಮಾರ್

BIG NEWS: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಆಶಿರ್ವಾದ ಪಡೆದು, ಪದಗ್ರಹಣ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಡಿ.ಕೆ.ಶಿವಕುಮಾರ್

ಬೆಂಗಳೂರು: ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಕ್ಷಣಗಣನೆ ಆರಂಭವಾಗಿದೆ. ಇಂದು ಸಂಜೆ ೪.೫ಕ್ಕೆ ಲೋಕಭವನದಲ್ಲಿ ನಡೆಯಲಿರುವ ಪದಗ್ರಹಣ ಸಮಾರಂಭದಲ್ಲಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಪ್ರದಗ್ರಹಣಕ್ಕೂ ಮುನ್ನ ಡಿ.ಕೆ.ಶಿವಕುಮಾರ್ ಖುದ್ದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರನ್ನು ಭೇಟಿಯಾಗಿ ಆಶಿರ್ವಾದ ಪಡೆದರು. ಶಾಲು ಹೊದಿಸಿ ಗೌರವಿಸಿದರು. ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬರುವಂತೆ ಆಹ್ವಾನಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಹೆಚ್.ಡಿ.ದೇವೇಗೌಡರು. ಡಿ.ಕೆ.ಶಿವಕುಮಾರ್ ಅವರಿಗೆ ಶುಭಕೋರಿದರು. ಸುಮಾರು 20 ನಿಮಿಷಗಳ ಕಾಲ ಡಿ.ಕೆ.ಶಿವಕುಮಾರ್, ಮಾಜಿ ಪ್ರಧಾನಿ ದೇವೇಗೌಡರ ಜೊತೆ ಮಾತುಕತೆ ನಡೆಸಿದರು. ನೂತನ ಸರ್ಕಾರಕ್ಕೆ ನಿಮ್ಮ ಸಹಕಾರ ಹಾಗೂ ಮಾರ್ಗದರ್ಶನ ಇರಲಿ ಎಂದು ಹೇಳಿದರು.

ಈ ವೇಳೆ ದೇವೇಗೌಡರು, ಖಂಡಿತ ನಮ್ಮ ಸಹಕಾರ ಸರ್ಕಾರಕ್ಕೆ ಯಾವತ್ತು ಇರುತ್ತದೆ. ಒಳ್ಳೆಯದಾಗಲಿ ಎಂದು ಹಾರೈಸಿದರು.

ಈ ಮೂಲಕ ಡಿ.ಕೆ.ಶಿವಕುಮಾರ್ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದು, ವಿಪಕ್ಷ ನಾಯಕರು, ಮಾಜಿ ಪ್ರಧಾನಿ, ಮಾಜಿ ಮುಖ್ಯಮಂತ್ರಿಗಳನ್ನು ಖುದ್ದು ಭೇಟಿಯಾಗಿ ಆಶೀರ್ವಾದ ಪಡೆಯುವ ಮೂಲಕ ಎಲ್ಲಾ ಸಮುದಾಯಗಳ ಜೊತೆಗೂ ಸಮನ್ವಯತೆ ಹಾಗೂ ಒಟ್ಟಾಗಿ ನಡೆಯುವ ಸಂದೇಶ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular