HomeKarnatakaBIG NEWS: ಕುಮಾರಸ್ವಾಮಿ ನಮ್ಮ ಬಗ್ಗೆ ಟೀಕೆ ಮಾಡಲಿಲ್ಲ ಎಂದರೆ ಅವರು ರಾಜಕೀಯವಾಗಿ ಬದುಕಲು ಸಾಧ್ಯವಿಲ್ಲ:...

BIG NEWS: ಕುಮಾರಸ್ವಾಮಿ ನಮ್ಮ ಬಗ್ಗೆ ಟೀಕೆ ಮಾಡಲಿಲ್ಲ ಎಂದರೆ ಅವರು ರಾಜಕೀಯವಾಗಿ ಬದುಕಲು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್

ಬೆಂಗಳೂರು: ಕುಮಾರಸ್ವಾಮಿ ಅವರು ನಮ್ಮ ಬಗ್ಗೆ ಟೀಕೆ ಮಾಡಲಿಲ್ಲ ಎಂದರೆ ರಾಜಕೀಯವಾಗಿ ಬದುಕಿರಲು ಆಗುವುದಿಲ್ಲ. ನಾವು ಒಳ್ಳೆಯ ಕೆಲಸ ಮಾಡುತ್ತೇವೆ, ಅವರು ವಿರೋಧ ಮಾಡುತ್ತಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ ಅವರು ಬಿಡದಿ ಟೌನ್ ಶಿಪ್ ಯೋಜನೆಯ ಬಗ್ಗೆ ಟೀಕೆ ಮಾಡಿರುವ ವಿಚಾರವಾಗಿ, ಅವರು ಮಾಡಿದ ಯೋಜನೆಯನ್ನೇ ನಾವು ಮುಂದುವರೆಸುತ್ತಾ ಇರುವುದು. ನಾನು ರೈತರ ಬಳಿ ಮಾತನಾಡಲು ಸಮಯ, ದಿನಾಂಕ ನಿಗದಿ ಮಾಡಿಕೊಂಡು ಹೋಗುತ್ತೇನೆ. ರೈತರು ನನಗೆ ಎರಡೇಟು ಹೊಡೆಯಬಹುದು, ಅಷ್ಟೇ ತಾನೇ..? ಬಟ್ಟೆ ಹರಿಯಬಹುದು, ಕಲ್ಲೆಸೆಬಹುದು, ಧಿಕ್ಕಾರ ಹಾಕಬಹುದು. ಅದಕ್ಕೆಲ್ಲಾ ಹೆದರಿಕೊಳ್ಳಲು ಆಗುತ್ತದೆಯೇ? ಮುಂದೆ ಅವರ ಭವಿಷ್ಯ, ಮಕ್ಕಳ ಹಾಗೂ ಆಸ್ತಿಗಳ ಭವಿಷ್ಯ ಮುಖ್ಯ. ಇವತ್ತಲ್ಲ ಮುಂದಿನ 20 ವರ್ಷಗಳ ನಂತರ ಬಿಡದಿ, ಬೆಂಗಳೂರು ದಕ್ಷಿಣದ ಜನರು ನನ್ನನ್ನು ನೆನಪಿಸಿಕೊಳ್ಳುತ್ತಾರೆ ಎಂದರು.

ಕುಮಾರಸ್ವಾಮಿ ಅವರೇ ಈ ಯೋಜನೆಯ ಭೂಮಿಯನ್ನು ಡಿನೊಟಿಫೈ ಮಾಡಬಹುದಿತ್ತಲ್ಲವೇ? ಯಾಕೆ ಮಾಡಲಿಲ್ಲ? ನಾನು ಡಿನೋಟಿಫೈ ಮಾಡಲು ತಯಾರಿಲ್ಲ. ಅವರು ಡಿನೋಟಿಫೈ ಮಾಡಿ ಎಷ್ಟು ಅನುಭವಿಸುತ್ತಿದ್ದಾರೆ ಎಂದು ಅವರಿಗೆ ಗೊತ್ತು‌. ಯಡಿಯೂರಪ್ಪ ಅವರಿಗೆ, ನನಗೂ ಗೊತ್ತಿದೆ ಎಂದು ತಿರುಗೇಟು ನೀಡಿದರು‌.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಲೆ ಏರಿಕೆ ಮೋದಿ ಅವರ ಕೊಡುಗೆ. ಅವರು ಬೇರೆ ರಾಷ್ಟ್ರಗಳ ಜೊತೆ ಉತ್ತಮ ಸಂಬಂಧ ಉಳಿಸಿಕೊಂಡು ಬಂದಿಲ್ಲ. ಅಂತರರಾಷ್ಟ್ರೀಯ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಮೋದಿ ಅವರು ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ. ಅದಕ್ಕೆ ಅವರು ವಿದ್ಯುತ್ ಉಳಿಸಿ, ಪೆಟ್ರೋಲ್ ಬಳಸಬೇಡಿ ಎಂದು ಹೇಳುತ್ತಿದ್ದಾರೆ. ಇಂಧನಗಳನ್ನು ಬಳಸದೇ ದಿನನಿತ್ಯ ಜೀವನ ಮಾಡುವುದು ಹೇಗೆ. ಅನೇಕರು ತಮ್ಮ ಬೆಂಗಾವಲು ಪಡೆ ವಾಹನಗಳನ್ನು ಕಡಿತ ಮಾಡಿದ್ದಾರೆ. ಇದು ಆಗಬಹುದು. ಆದರೆ ಜನ ಸಾಮಾನ್ಯ ಓಡಾಟ ಮಾಡದೇ ಇರಲು ಹೇಗೆ ಸಾಧ್ಯ. ಬದುಕಿಗಾಗಿ ಪ್ರಯಾಣ ಮಾಡಬೇಕಲ್ಲವೇ? ಚಿನ್ನ‌ ಖರೀದಿ ಮಾಡಬೇಡಿ ಎಂದಿದ್ದಾರೆ ಇದು ಹೇಗೆ ಸಾಧ್ಯ. ವಿವಾಹಿತ ಮಹಿಳೆಯರಿಗೆ ಮಾಂಗಲ್ಯ ಸರ ಬೇಕು.‌ ಹೀಗಿದ್ದಾಗ ಚಿನ್ನ ಕೊಂಡುಕೊಳ್ಳಬೇಡಿ ಎಂಬುದು ಹೇಗೆ ಸಾಧ್ಯ ಎಂದರು.

ದೇಶ ದೊಡ್ಡ ದುರಂತದ ಸ್ಥಿತಿಗೆ ಬಂದಿದೆ. ಅಡುಗೆ ಎಣ್ಣೆ ಬಳಸಬೇಡಿ ಎಂದರೆ ಎಲ್ಲಿ ಕಡಿಮೆ ಮಾಡೋಕೆ ಆಗುತ್ತೆ. ಇದೆಲ್ಲಾ ಮಾಡೋಕೆ ಆಗಲ್ಲ. ಜನ ಸಂಪಾದನೆ ಮಾಡುತ್ತಾರೆ ಬದುಕುತ್ತಾರೆ. ಯಾರನ್ನೂ ನಿಯಂತ್ರಣ ಮಾಡೋಕೆ ಆಗಲ್ಲ ಎಂದರು.

ಬೆಂಗಳೂರಿನ ಜನರಿಗೆ ಭೂಮಿ ಗ್ಯಾರಂಟಿ ವಿಚಾರವಾಗಿ, ಜನಸಾಮಾನ್ಯರು ಸಂಪಾದಿಸಿದ ಆಸ್ತಿಗಳಿಗೆ ಸರಿಯಾದ ರೀತಿಯಲ್ಲಿ ದಾಖಲೆಗಳನ್ನು ಒದಗಿಸಿಕೊಡಬೇಕು ಎಂದು ನಾವು ಆರನೇ ಗ್ಯಾರಂಟಿಯಾಗಿ “ಭೂಮಿ ಗ್ಯಾರಂಟಿ”ಯನ್ನು ಜಾರಿಗೆ ತಂದಿದ್ದೇವೆ. ಜನರ ಮನೆ ಬಾಗಿಲಿಗೆ ಇ ಖಾತೆಗಳನ್ನು ತಲುಪಿಸುವ ವ್ಯವಸ್ಥೆ ಮಾಡಿದ್ದೇವೆ‌. ಬಿ ಯಿಂದ ಎ ಖಾತೆ ಬದಲಾವಣೆ ಮಾಡಿಕೊಡುತ್ತಿದ್ದೇವೆ ಎಂದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular