BIG NEWS: ಕನಕಪುರ ಬೆಂಗಳೂರು ಸೇರಲಿದೆ; ನಿಮ್ಮ ಭೂಮಿ ಮಾರಾಟ ಮಾಡಬೇಡಿ: ಗ್ರಾಮಸ್ಥರಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

ಬೆಂಗಳೂರು: ಯಾವುದೇ ಕಾರಣಕ್ಕೂ ನಿಮ್ಮ ಭೂಮಿಯನ್ನು ಬೆಂಗಳೂರಿಗರಿಗೆ ಮಾರಾಟ ಮಾಡಬೇಡಿ ಎಂದು ಶಿವನಹಳ್ಳಿ ಗ್ರಾಮಸ್ಥರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.

ಶಿವನಹಳ್ಳಿ ಗ್ರಾಮದ ವೀರಭದ್ರಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಭೂಮಿ ಪೂಜೆ ಮತ್ತು ಶಿಲಾ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಕೆಎಂಎಫ್ ಡೇರಿ ಇದೆ, ಕನಕಪುರ ಪಟ್ಟಣವಾಗಿ ಇಲ್ಲಿಯ ತನಕ ಬೆಳೆಯಲಿದೆ. ಹಾಗಾಗಿ ನಿಮ್ಮ ಭೂಮಿ ಮಾರಾಟ ಮಾಡಬೇಡಿ ಎಂದರು.

ನಿಮ್ಮ ಜೇಬಿಗೆ ನಾನು ನೇರವಾಗಿ ದುಡ್ಡು ಹಾಕಲು, ಮನೆ ಕಟ್ಟಿಸಿಕೊಡಲು ಆಗಲ್ಲ, ಆದರೆ ನಿಮ್ಮ ಆಸ್ತಿ ಮೌಲ್ಯಗಳನ್ನ ಹತ್ತು ಪಟ್ಟು ಹೆಚ್ಚು ಮಾಡುವ ಶಕ್ತಿ ದೇವರು ನೀಡಿದ್ದಾನೆ. ನಿಮ್ಮ ಮಕ್ಕಳು, ಮೊಮ್ಮಕ್ಕಳಿಗೆ ವಿದ್ಯೆ ನೀಡಬಹುದು ಅಷ್ಟೇ. ಕನಕಪುರದವರು ರಾಮನಗರ ಜಿಲ್ಲೆಯವರಲ್ಲ, ಬೆಂಗಳೂರು ಜಿಲ್ಲೆಯವರು ಎಂಬುದನ್ನು ನೆನಪಿನಲ್ಲಿ ಇಟ್ಟುಕೊಳ್ಳಿ. ಒಂದಲ್ಲ ಒಂದು ದಿನ ಇಲ್ಲಿನ ಗ್ರಾಮಗಳು ಬೆಂಗಳೂರು ಆಗುತ್ತವೆ. ಪ್ರತಿ ಅಡಿ ಲೆಕ್ಕದಲ್ಲಿ ಬೆಲೆ ಕಟ್ಟಲಾಗುತ್ತದೆ. ಹಾಗಾಗಿ ನನ್ನ ಮಾತನ್ನು ನೆನಪಿನಲ್ಲಿ ಇಟ್ಟುಕೊಳ್ಳಿ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read