HomeKarnatakaಲೋಕಾಯುಕ್ತ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲ್ಲ: ಏನು ತಪ್ಪಾಗಿದೆ ಎಂದು ಬಿಜೆಪಿಯವರೇ ಹೇಳಬೇಕು ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

ಲೋಕಾಯುಕ್ತ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲ್ಲ: ಏನು ತಪ್ಪಾಗಿದೆ ಎಂದು ಬಿಜೆಪಿಯವರೇ ಹೇಳಬೇಕು ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

ಕಾರವಾರ: ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದು, ಜೈಲು ಪಾಲಾಗಿರುವ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಯಾವಾಗಲೂ ತಾವು ಪರಿಶುದ್ಧರು ಎಂದು ಹೇಳುತ್ತಿದ್ದ ಬಿಜೆಪಿ ನಾಯಕರು ಈಗ ಏನು ಹೇಳುತ್ತಾರೆ? ಎಂದಿದ್ದಾರೆ.

ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವ ವಿಚಾರವಾಗಿ ಇದು ಕಾಂಗ್ರೆಸ್ ನಾಯಕರ ಷ್ಡ್ಯಂತ್ರ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಉತ್ತರಿಸುತ್ತಾ, ಲೋಕಾಯುಕ್ತ ಸ್ವತಂತ್ರ ಸಂಸ್ಥೆ. ಅದರ ತನಿಖೆಯಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಂದ್ರು ಲಮಾಣಿಯವರನ್ನು ಸ್ವಾಮೀಜಿ ಅವರು ಸಿಕ್ಕಿ ಹಾಕಿಸಿದ್ದಾರೆ ಎಂಬ ಆಡಿಯೋ ಬಗ್ಗೆ ಪ್ರತಿಕ್ರಿಯಿಸಿ, ಏನು ತಪ್ಪಾಗಿದೆ ಎಂದು ಬಿಜೆಪಿಯವರು ಹೇಳಬೇಕು. ಲೋಕಾಯುಕ್ತ ವಿಚಾರದಲ್ಲಿ ನಾವು ಹೋಗುವುದು ಸರಿಯಲ್ಲ ಎಂದರು.

ಯಾರು ಸಿಕ್ಕಿ ಹಾಕಿಸಿದ್ದಾರೋ ಇಲ್ಲವೋ ನಮಗೆ ಗೊತ್ತಿಲ್ಲ. ನಮಗೂ ಇದಕ್ಕೂ ಸಂಬಂಧವಿಲ್ಲ. ನಾವು ಈ ಬಗ್ಗೆ ಮಾತನಾಡುವುದೂ ಇಲ್ಲ. ಲೋಕಾಯುಕ್ತ ಸಂಸ್ಥೆಯಲ್ಲಿ ದೂರು ದಾಖಲಾದ ಅನ್ವಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular