HomeKarnatakaBREAKING: ವಿಧಾನಸೌಧದಿಂದ ಕನಕಪುರ ರಸ್ತೆವರೆಗೆ ಮೆಟ್ರೋದಲ್ಲಿ ಪ್ರಯಾಣಿಸಿದ ಸಿಎಂ ಡಿ.ಕೆ.ಶಿವಕುಮಾರ್: ಜೀರೋ ಟ್ರಾಫಿಕ್ ನಿಂದ ಸಾರ್ವಜನಿಕರಿಗಾಗುವ...

BREAKING: ವಿಧಾನಸೌಧದಿಂದ ಕನಕಪುರ ರಸ್ತೆವರೆಗೆ ಮೆಟ್ರೋದಲ್ಲಿ ಪ್ರಯಾಣಿಸಿದ ಸಿಎಂ ಡಿ.ಕೆ.ಶಿವಕುಮಾರ್: ಜೀರೋ ಟ್ರಾಫಿಕ್ ನಿಂದ ಸಾರ್ವಜನಿಕರಿಗಾಗುವ ತೊಂದರೆ ತಪ್ಪಿಸಲು ಮಹತ್ವದ ನಿರ್ಧಾರ

ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸಿಎಂ ಡಿ.ಕೆ.ಶಿವಕುಮಾರ್ ಇದೇ ಮೊದಲ ಬಾರಿಗೆ ಸ್ವಕ್ಷೇತ್ರ ಕನಕಪುರಕ್ಕೆ ಭೇಟಿ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ಕನಕಪುರದ ರಸ್ತೆವರೆಗೂ ಡಿ.ಕೆ.ಶಿವಕುಮಾರ್ ಮೆಟ್ರೋದಲ್ಲಿ ಪ್ರಯಾಣಿಸಿ ಗಮನ ಸೆಳೆದರು.

ಸಿಎಂ ಡಿ.ಕೆ. ಶಿವಕುಮಾರ್​ ಇಂದು ಬೆಂಗಳೂರು ದಕ್ಷಿಣ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸಿಎಂ ಆದ ಬಳಿಕ ಸ್ವಕ್ಷೇತ್ರ ಕನಕಪುರಕ್ಕೆ ಮೊದಲ ಭಾರಿಗೆ ಭೇಟಿ ನೀಡುತ್ತಿರುವ ಡಿ.ಕೆ. ಶಿವಕುಮಾರ್​ ಹಾರೋಹಳ್ಳಿ ಮತ್ತು ಕನಕಪುರ ತಾಲೂಕಿನಲ್ಲಿ ಕೃತಜ್ಞತಾ ಸಮರ್ಪಣಾ ಕಾರ್ಯಕ್ರಮದಲ್ಲಿ ಭಾಗಿಯಾದಲಿದ್ದಾರೆ.

ಬೆಂಗಳೂರಿನ ಸದಾಶಿವನಗರ ನಿವಾಸದಿಂದ ವಿಧಾನಸೌಧದ ಮೆಟ್ರೋ ಸ್ಟೇಷನ್‌ ಗೆ ಆಗಮಿಸಿದ ಡಿ.ಕೆ.ಶಿವಕುಮಾರ್, ವಿಧಾನಸೌಧದ ಮೆಟ್ರೋ ನಿಲ್ದಾಣದಿಂದ ಕನಕಪುರ ರಸ್ತೆವರೆಗೂ ಮೆಟ್ರೋದಲ್ಲಿ ಪ್ರಯಾಣಿಸಿದರು. ಪ್ರಯಾಣಿಕರು ಸಿಎಂ ಡಿ.ಕೆ.ಶಿವಕುಮಾರ್ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಖುಷಿಪಟ್ಟರು. ಜೀರೋ ಟ್ರಾಫಿಕ್​ನಿಂದ ವಾಹನ ಸವಾರರಿಗೆ ಆಗುವ ತೊಂದರೆಯನ್ನು ತಪ್ಪಿಸಲು ಈ ನಿರ್ಧಾರ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕನಕಪುರ ರಸ್ತೆ ತಲುಪಿದ ಬಳಿಕ ಅಲ್ಲಿಂದ ರಸ್ತೆ ಮಾರ್ಗವಾಗಿ ತಮ್ಮ ಪ್ರವಾಸ ಮುಂದುವರೆಸಲಿದ್ದಾರೆ. ಪ್ರವಾಸ ಮುಗಿಸಿ ಇಂದು ರಾತ್ರಿ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ಸಾರ್ವಜನಿಕರಿಗೆ ಜೀರೋ ಟ್ರಾಫಿಕ್‌ನಿಂದ ಉಂಟಾಗುವ ವಾಹನ ಸಂಚಾರದ ತೊಂದರೆಯನ್ನು ತಪ್ಪಿಸುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮೆಟ್ರೋ ಪ್ರಯಾಣದ ನಡೆ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular