ಬೆಂಗಳೂರು: ಮೆಟ್ರೋ ದರದ ಬಗ್ಗೆ ತೀರ್ಮಾನ ಮಾಡಲು ಪ್ರತ್ಯೇಕ ಸಮಿತಿ ಇದೆ. ಕೇಂದ್ರ ಸರ್ಕಾರದ ಕಾರ್ಯದರ್ಶಿ ಇದರ ಮುಖ್ಯಸ್ಥರು. ಮೆಟ್ರೋ ದರ ಏರಿಕೆ ವಿಚಾರವಾಗಿ ನಮ್ಮ ಅಭಿಪ್ರಾಯವನ್ನು ಕೇಳಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಮೆಟ್ರೋ ದರದ ವಿಚಾರವಾಗಿ ನಾನು ಬೆಂಗಳೂರಿಗೆ ಮರಳಿದ ಬಳಿಕ ಈ ಬಗ್ಗೆ ಚರ್ಚೆ ಮಾಡುವೆ. ಜನರಿಗೆ ತೊಂದರೆ ನೀಡಲು ನಮಗೆ ಇಷ್ಟವಿಲ್ಲ. ಆರ್ಥಿಕ ಸ್ಥಿತಿಗತಿ ಪರಿಶೀಲನೆ ಮಾಡುತ್ತೇನೆ ಎಂದು ತಿಳಿಸಿದರು.
ನೀವು ಸಿಎಂ ಆಗಬೇಕು ಎಂಬ ಕನಸು ಜನರಿಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಕನಸು ಜನರಿಗೂ ಇದೆ, ಶಾಸಕರಿಗೂ ಇದೆ, ನಿಮಗೆ ಮಾಧ್ಯಮದವರಿಗೂ ಇದೆ. ಪಕ್ಷ ಏನು ಹೇಳುತ್ತದೆ ಅದನ್ನು ಕೇಳಬೇಕು ಎಂದು ತಿಳಿಸಿದರು.
ರಾಜ್ಯ ಬಜೆಟ್ ಬಳಿಕ ಅಧಿಕಾರ ಹಂಚಿಕೆ ಎಂಬ ಚರ್ಚೆ ಬಗ್ಗೆ ಸಮಯವೇ ಉತ್ತರ ನೀಡಲಿದೆ ಎಂದರು.

