HomeLatest NewsBIG NEWS: ಮನರೇಗಾ ಯೋಜನೆ ಉಳಿಸಲು ನಾಳೆ ರಾಜಭವನ ಚಲೋ: ಡಿಸಿಎಂ ಡಿ.ಕೆ.ಶಿವಕುಮಾರ್

BIG NEWS: ಮನರೇಗಾ ಯೋಜನೆ ಉಳಿಸಲು ನಾಳೆ ರಾಜಭವನ ಚಲೋ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಮನರೇಗಾ ಯೋಜನೆ ಹೆಸರನ್ನು ಬದಲಾಯಿಸಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿ ರಾಜ್ಯ ಕಾಂಗ್ರೆಸ್ ನಯಕರು ನಾಳೆ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ರಾಜಭವನ ಚಲೋ ನಡೆಸಲಿದ್ದಾರೆ. ಈ ಬಗ್ಗೆ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಮನರೇಗಾ ಉಳಿಸುವ ಸಲುವಾಗಿ ಮಂಗಳವಾರ ರಾಜಭವನ ಚಲೋ ನಡೆಸಲಾಗುವುದು. ಪ್ರತಿ ತಾಲ್ಲೂಕಿನಲ್ಲೂ ಕನಿಷ್ಠ ಐದು ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಫ್ರೀಡಂ ಪಾರ್ಕ್ ನಲ್ಲಿ ನಾಳೆ ನಡೆಯಲಿರುವ ಪ್ರತಿಭಟನಾ ಸ್ಥಳ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮನರೇಗಾ ಉಳಿವಿಗಾಗಿ ಹೋರಾಟ ನಡೆಸುತ್ತಿದ್ದೇವೆ. ಪ್ರತಿ ತಾಲೂಕು, ಪ್ರತಿ ಪಂಚಾಯತಿ ಮಟ್ಟದಲ್ಲೂ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

20 ವರ್ಷಗಳ ಹಿಂದೆ ಸೋನಿಯಾಗಾಂಧಿ ಅವರ ನಾಯಕತ್ವದಲ್ಲಿ ಮನಮೋಹನ್ ಸಿಂಗ್ ಅವರ ಸರ್ಕಾರ ಜಾರಿಗೆ ತಂದಿದ್ದ ಸಾಂವಿಧಾನಿಕ ಹಕ್ಕಾಗಿ ಬಂದಿರುವ ಮನರೇಗಾವನ್ನು ನಾಶ ಮಾಡಲು ಹೊರಟಿರುವುದು ನಮಗೆಲ್ಲಾ ಆಶ್ಚರ್ಯ ಉಂಟು ಮಾಡಿದೆ. ಮಹಾತ್ಮಗಾಂಧಿ ಅವರ ಹೆಸರಿನಲ್ಲಿ ಪ್ರಾರಂಭವಾದ ಯೋಜನೆ ಗ್ರಾಮೀಣ ಭಾಗದ ಜನರ ಉದ್ಯೋಗದ ಹಕ್ಕಿಗೆ ಖಾತ್ರಿ ನೀಡಿತ್ತು. ಆದರೆ ಈ ಹಕ್ಕು ಈಗ ಮೊಟಕಾಗಿದೆ. ಆದಕಾರಣ ಇಡೀ ದೇಶದ ಉದ್ದಗಲಕ್ಕೂ ಈ ಬಗ್ಗೆ ಹೋರಾಟ ರೂಪಿಸಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿವರ್ಷ 6 ಸಾವಿರ ಕೋಟಿ ರೂ. ಮೊತ್ತದ ಕಾಮಗಾರಿಗಳು ಮನರೇಗಾ ಅಡಿ ನಡೆಯುತ್ತಿದ್ದವು. ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ದೊರೆಯುತ್ತಿತ್ತು. ವಿಧಾನಸಭೆಯಲ್ಲೂ ಇದರ ಬಗ್ಗೆ ಪ್ರತಿಭಟನೆ ಹಾಗೂ ನಿರ್ಣಯ ತೆಗೆದುಕೊಳ್ಳಲು ನಾವು ಸಜ್ಜಾಗಿದ್ದೇವೆ ಎಂದರು‌.

ಮನರೇಗಾ ಮರು ಸ್ಥಾಪಿಸುವವರೆಗೂ ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಹೋರಾಟ ಮಾಡಲಾಗುವುದು ಎಂದರು.

ಮನರೇಗಾವನ್ನು ನಾಶ ಮಾಡುವ ಕಾನೂನನ್ನು ಹಿಂಪಡೆಯಬೇಕು ಎಂದು ಆಗ್ರಹಿಸಲಾಗುವುದು. ರೈತರ ಕರಾಳ ಕಾಯ್ದೆಗಳನ್ನು ಹೇಗೆ ಹಿಂಪಡೆಯಲಾಯಿತೋ ಅದೇ ರೀತಿ ಇದನ್ನೂ ಹಿಂಪಡೆಯಬೇಕು. ಹಿಂಪಡೆಯುವವರೆಗೂ ಹೋರಾಟ ಮುಂದುವರೆಸಲಾಗುವುದು ಎಂದರು.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೂ ಸಹ ಬಾಯಿ ಬಿಡುತ್ತಿಲ್ಲ. ಹೊಸ ಕಾಯ್ದೆಯನ್ನು ಅನುಷ್ಠಾನಗೊಳಿಸಲು ಸಾಧ್ಯವಿಲ್ಲ. ಗ್ರಾಮೀಣ ಭಾಗದ ಜನಪ್ರತಿನಿಧಿಯಾಗಿ ನನ್ನ ಅನುಭವದಲ್ಲಿ ಹೇಳುವುದಾದರೆ ಇದರ ಅನುಷ್ಠಾನ ಅಸಾಧ್ಯ ಎಂದರು. ಈ ಯೋಜನೆಗೆ ಅನುದಾನ ಒಗಗಿಸಿ ಕೊಡುವವರು ಯಾರು? ಕೇಂದ್ರವೇ ಅನುದಾನ ಒದಗಿಸಿಕೊಡಲಿ. ಕೆಲವು ನಾಯಕರು ಚರ್ಚೆಗೆ ಬರುತ್ತೇವೆ ಎಂದು ಹೇಳಿದ್ದಾರೆ. ನಾವು ಸದನದಲ್ಲಿ ಅವರ ಚರ್ಚೆಗೆ ಉತ್ತರ ನೀಡಲು ಸಿದ್ಧರಿದ್ದೇವೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular