HomeUncategorizedBIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಹರಿದ್ವಾರದ ನಾಗಾಸಾಧುಗಳು ಭೇಟಿ: ಡಿಸಿಎಂ ಹೇಳಿದ್ದೇನು?

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಹರಿದ್ವಾರದ ನಾಗಾಸಾಧುಗಳು ಭೇಟಿ: ಡಿಸಿಎಂ ಹೇಳಿದ್ದೇನು?

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ಕುರ್ಚಿ ಕಿತ್ತಾಟ ವಿಚಾರ ಜೋರಾಗಿ ಚರ್ಚೆ ನಡೆಯುತ್ತಿರುವ ನಡುವೆಯೇ ಹರಿದ್ವಾರದ ನಾಗಾಸಾಧುಗಳು ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದಾರೆ.

ಕೆಲ ದಿನಗಳ ಹಿಂದೆ ಕಾಶಿಯಿಂದ ಆಗಮಿಸಿದ್ದ ನಾಗಾಸಾಧುಗಳು ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂದು ಆಶಿರ್ವಾದ ಮಾಡಿ ತೆರಳಿದ್ದರು. ಇದರ ಬೆನ್ನಲ್ಲೇ ಇಂದು ಹರಿದ್ವಾರದಿಂದ ಆಗಮಿಸಿರುವ ನಾಗಾಸಾಧುಗಳು ಡಿ.ಕೆ.ಶಿವಕುಮಾರ್ ಮನೆಗೆ ಭೇಟಿ ನೀಡಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ,ಕೆ.ಶಿವಕುಮಾರ್ ಮನೆಗೆ ಭೇಟಿ ನೀಡಿರುವ ನಾಗಾಸಾಧುಗಳು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಆಶಿರ್ವಾದ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಗಾಸಾಧುಗಳ ಭೇಟಿ ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ್, ಮನೆಗೆ ಬಂದ ನಾಗಾಸಾಧುಗಳನ್ನು ಒಳಗೆ ಕರೆದು ಆಶಿರ್ವಾದ ಪಡೆದುಕೊಂಡಿದ್ದೇನೆ. ಅವರು ಧಾರ್ಮಿಕತೆಯಲ್ಲಿ ಬಂದಿದ್ದರು. ಬಂದವರನ್ನು ಭೇಟಿಯಾಗಿ ಆಶಿರ್ವಾದ ಪಡೆದಿದ್ದೇನೆ ಎಂದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular