HomeLive Newsದೇಶದಲ್ಲಿ ಯಾರ ಮೇಲೆ ಕೇಸ್‌ಗಳಿಲ್ಲ? ಎಷ್ಟು ಜನ ಸಚಿವರಾದವರು ಜಾಮೀನು ಮೇಲೆ ಇಲ್ಲ? ವಿಪಕ್ಷಗಳಿಗೆ ಸಿಎಂ...

ದೇಶದಲ್ಲಿ ಯಾರ ಮೇಲೆ ಕೇಸ್‌ಗಳಿಲ್ಲ? ಎಷ್ಟು ಜನ ಸಚಿವರಾದವರು ಜಾಮೀನು ಮೇಲೆ ಇಲ್ಲ? ವಿಪಕ್ಷಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು

ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಆರೋಪ ಹೊತ್ತಿರುವ ಬಿ.ನಾಗೇಂದ್ರ ಅವರನ್ನು ಸಚಿವ ಸಂಪುಟದಲ್ಲಿ ಸೇರಿಸಿಕೊಂಡಿರುವುದಕ್ಕೆ ವಿಪಕ್ಷ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ನಾಗೇಂದ್ರ ರಾಜೀನಾಮೆ ನೀಡುವವರೆಗೂ ಅಧಿವೇಶನ ನಡೆಯಲು ಬಿಡಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ವಿಪಕ್ಷ ನಾಯಕ ಟೀಕೆಗಳಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ದೇಶದಲ್ಲಿ ಯಾರ ಮೇಲೆ ಕೇಸ್‌ಗಳಿಲ್ಲ? ಎಷ್ಟು ಜನ ಜಾಮೀನು ಪಡೆದು ಸಚಿವರಾಗಿಲ್ಲ? ಎಂದು ಪ್ರಶ್ನಿಸುವ ಮೂಲಕ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.

ದೇಶದಲ್ಲಿ ಯಾರ ಮೇಲೆ ಕೇಸ್‌ಗಳಿಲ್ಲ? ಹೆಚ್.ಡಿ. ಕುಮಾರಸ್ವಾಮಿ ಜಾಮೀನು ಪಡೆದುಕೊಂಡಿಲ್ಲವೇ? ದೇಶದಲ್ಲಿ ಎಷ್ಟು ಜನ ಸಚಿವರಾದವರು ಜಾಮೀನು ಮೇಲೆ ಇಲ್ಲ ಎಂದು ಪ್ರಶ್ನಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ನಾಗೇಂದ್ರ ಅವರು ಕೋರ್ಟ್ ಷರತ್ತು ಉಲ್ಲಂಘಿಸಿ ಕರ್ನಾಟಕದಿಂದ ಹೊರಗೆ ಹೋಗಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಯಾವುದೇ ನಿಯಮ ಉಲ್ಲಂಘನೆಯಾಗಿದೆ ಎಂದು ನ್ಯಾಯಾಲಯ ಯಾವುದೇ ಆದೇಶ ನೀಡಿಲ್ಲ. ಕಾನೂನಿನ ಚೌಕಟ್ಟಿನಲ್ಲಿ ಏನೇ ಇದ್ದರೂ ಅದನ್ನು ಪರಿಶೀಲಿಸುತ್ತೇವೆ. ವಿಪಕ್ಷಗಳಿಗೆ ಚರ್ಚಿಸಲು ವಿಷಯಗಳು ಬೇಕು, ಹಾಗಾಗಿ ಮಾತನಾಡುತ್ತಿದ್ದಾರೆ, ಮಾತನಾಡಲಿ ಬಿಡಿ ಎಂದರು.

ಪರಿಷತ್‌ ಸಭಾಪತಿ ಸ್ಥಾನಕ್ಕೆ ಅಭ್ಯರ್ಥಿಯನ್ನು ಕಣಕ್ಕಿಳಿಸುವಂತೆ ವರಿಷ್ಠರು ತಿಳಿಸಿದ್ದಾರೆ. ಬಸವರಾಜ ಹೊರಟ್ಟಿ ಅವರೇ ಸ್ವತಃ ನನ್ನ ಬಳಿ ಬಂದು ರಾಜೀನಾಮೆ ನೀಡುವುದಾಗಿ ತಿಳಿಸಿದ್ದರು. ಅವರು ಗೌರವಯುತವಾಗಿ ನೀಡಿದ ರಾಜೀನಾಮೆಯನ್ನು ಒಪ್ಪಿಕೊಳ್ಳಲಾಗಿತ್ತು. ಹೊರಟ್ಟಿ ಅವರೇ ಸ್ವತಃ ಟೈಪ್ ಮಾಡಿ ರಾಜೀನಾಮೆ ಪತ್ರ ನೀಡಿದ್ದಾರೆ, ಇಲ್ಲದಿದ್ದರೆ ನಾವು ಅವಿಶ್ವಾಸ ನಿರ್ಣಯ ಮಂಡಿಸುತ್ತಿದ್ದೆವು ಎಂದರು.

ಬಲವಂತವಾಗಿ ರಾಜೀನಾಮೆ ಕೊಡಿಸಲಾಗಿದೆ ಎಂದು ವಿಪಕ್ಷಗಳು ರಾಜ್ಯಪಾಲರಿಗೆ ದೂರು ನೀಡಿ ಕಾನೂನು ತೊಡಕು ಸೃಷ್ಟಿಸಲು ಯತ್ನಿಸುತ್ತಿವೆ. ಈ ಹಿನ್ನೆಲೆಯಲ್ಲಿ ಯು.ಟಿ. ಖಾದರ್ ಹಾಗೂ ನಾನು ರಾಜ್ಯಪಾಲರನ್ನು ಭೇಟಿಯಾಗಿ ಸಂಪೂರ್ಣ ವಿವರಣೆ ನೀಡಿದ್ದೇವೆ. ಬಿಜೆಪಿ ತನ್ನದೇ ಪಕ್ಷದ ಹಿರಿಯ ನಾಯಕರಿಗೆ ಕಿರುಕುಳ ನೀಡುತ್ತಿದ್ದು, ಈ ಬಗ್ಗೆ ಹೈಕಮಾಂಡ್ ಹಾಗೂ ರಾಜ್ಯಪಾಲರ ಗಮನಕ್ಕೆ ತರಲಾಗಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular