HomeKarnatakaBIG NEWS: ನಾಳೆ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ: ಲೋಕಭವನಕ್ಕೆ ಬರುವ ಅತಿಥಿಗಳಿಗೆ ಮೂರು...

BIG NEWS: ನಾಳೆ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ: ಲೋಕಭವನಕ್ಕೆ ಬರುವ ಅತಿಥಿಗಳಿಗೆ ಮೂರು ರೀತಿಯ ಪಾಸ್ ವಿತರಣೆ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಲೋಕಭವನದಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಲಿದ್ದು, ಪ್ರಮುಖ ಅತಿಥಿಗಳಿಗೆ ಮೂರು ರೀತಿಯ ಪಾಸ್ ವಿತರಣೆ ಮಾಡಲಾಗುತ್ತಿದೆ.

ಲೋಕಭವನದ ಗಾಜಿನಮನೆಯಲ್ಲಿ ಸಂಜೆ 4.05ಕ್ಕೆ ಪ್ರಮಾಣವಚನ ಸಮಾರಂಭ ನಡೆಯಲಿದೆ. ಕಾರ್ಯಕ್ರಮಕ್ಕೆ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿವೆ. ನಾಳೆಯ ಪದಗ್ರಹಣ ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು, ಸಿನಿಮಾ ತಾರೆಯರು, ಶಾಸಕರು, ಮಾಜಿ ಸಚಿವರು ಸೇರಿ ಗಣ್ಯರು ಭಾಗಿಯಾಗಲಿದ್ದು, ಕಾರ್ಯಕ್ರಮಕ್ಕೆ ಬರುವರಿಗೆ ಮೂರು ರೀತಿ ಪಾಸ್ ನೀಡಲು ಸಿದ್ಧತೆ ನಡೆದಿದೆ.

ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಪ್ರಮುಖ ನಾಯಕರ ಕುಟುಂಬಗಳು, ಬೆಂಬಲಿಗರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಇರಲಿದೆ. ಅತಿ ಗಣ್ಯರು, ಗಣ್ಯರು ಹಾಗೂ ಸಾಮಾನ್ಯರಿಗೆ ಪ್ರತ್ಯೇಕ ಪಾಸ್ ವ್ಯವಸ್ಥೆ ಇರಲಿದ್ದು, ಮಧ್ಯಾಹ್ನ 2 ಗಂಟೆ ಒಳಗಾಗಿ ಲೋಕಭವನಕ್ಕೆ ಬರುವಂತೆ ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಾವುದೇ ಆಡಂಭರವಿಲ್ಲದೆ ಸರಳವಾಗಿ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಇನ್ನು ನಾಳೆ ನಡೆಯಲಿರುವ ನೂತನ ಸಿಎಂ ಪ್ರಮಾಣವಚನ ಕಾರ್ಯಕ್ರಮದ ಅಂತಿಮ ಹಂತದ ಸಿದ್ಧತೆಯನ್ನು ರಾಜ್ಯಪಾಲ ಥಾವರ್​​ಚಂದ್​​ ಗೆಹ್ಲೋಟ್ ಕೂಡ​​ ವೀಕ್ಷಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular