HomeKarnatakaBIG NEWS: ಯಾವುದೇ ಆಡಂಬರವಿಲ್ಲದೇ, ಸರಳವಾಗಿ ಪ್ರಮಾಣವಚನ ಸ್ವೀಕರಿಸಲು ಡಿ.ಕೆ.ಶಿವಕುಮಾರ್ ನಿರ್ಧಾರ: ಅಭಿಮಾನಿಗಳು ಬೆಂಗಳೂರಿಗೆ ಬರದಂತೆ...

BIG NEWS: ಯಾವುದೇ ಆಡಂಬರವಿಲ್ಲದೇ, ಸರಳವಾಗಿ ಪ್ರಮಾಣವಚನ ಸ್ವೀಕರಿಸಲು ಡಿ.ಕೆ.ಶಿವಕುಮಾರ್ ನಿರ್ಧಾರ: ಅಭಿಮಾನಿಗಳು ಬೆಂಗಳೂರಿಗೆ ಬರದಂತೆ ಮನವಿ

ಬೆಂಗಳೂರು: ಹೈಕಮಾಂಡ್ ಸೂಚನೆ ಮೇರೆಗೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಹೊಸ ಸರ್ಕಾರ ರಚನೆಗೆ ಪ್ರಕ್ರಿಯೆ ಪ್ರಾರಂಭವಾಗಿದೆ. ಜೂನ್ 3ರಂದು ಡಿ.ಕೆ.ಶಿವಕುಮಾರ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಜೆ.ಸಿ.ಚಂದ್ರಶೇಖರ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಜೂನ್ 3ರಂದು ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಯಾವುದೇ ಅದ್ಧೂರಿತನ, ಆಡಂಬರಗಳಿಲ್ಲದೇ ಅತ್ಯಂತ ಸರಳವಾಗಿ ಪ್ರಮಾಣವಚನ ಸ್ವೀಕರಿಸಲು ಡಿ.ಕೆ.ಶಿವಕುಮಾರ್ ನಿರ್ಧರಿಸಿದ್ದಾರೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಮಾಣವಚನ ಕಾರ್ಯಕ್ರಮಕ್ಕೆ ಅಭಿಮಾನಿಗಳು ಬೆಂಗಳೂರಿಗೆ ಬರದಂತೆ ಮನವಿ ಮಾಡಲಾಗಿದೆ. ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿರುವುದರಿಂದ ಯಾವ ಅಭಿಮಾನಿಗಳು ಬೆಂಗಳೂರಿಗೆ ಬರುವುದು ಬೇಡ. ಯಾರಿಗೂ ಯಾವುದೇ ಪಾಸುಗಳನ್ನು ವಿತರಣೆ ಮಾಡುವುದಿಲ್ಲ. ಡಿ.ಕೆ.ಶಿವಕುಮಾರ್ ಸರಳವಾಗಿ ಪ್ರಮಾಣವಚನ ಸ್ವೀಕರಿಸಲು ತೀರ್ಮಾನಿಸಿದ್ದಾರೆ ಎಂದು ತಿಳಿಸಿದರು.

ಪೆಟ್ರೋಲ್, ಡೀಸೆಲ್ ದರ ಏರಿಕೆ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರು ಸಂಕಷ್ಟ ಎದುರುಸುತ್ತಿದ್ದು, ಇಂತಹ ಸಂದರ್ಭದಲ್ಲಿ ಪ್ರಮಾಣವಚನ ಕಾರ್ಯಕ್ರಮಕ್ಕೆಂದು ಖರ್ಚು ವೆಚ್ಚ ಮಾಡಿಕೊಂಡು ಬೆಂಗಳೂರಿಗೆ ಬರುವುದು ಬೇಡ ಎಂದು ಹೇಳುವ ಮೂಲಕ ಮಿತವ್ಯಯದ ಬಗ್ಗೆ ಸಂದೇಶ ನೀಡಿದ್ದಾರೆ. ಇನ್ನು ಲೋಕಭವನದಲ್ಲಿ ಪದಗ್ರಹಣ ಸಮಾರಂಭವಿರುವುದರಿಂದ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧವಿರಲಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular