ಬೆಂಗಳೂರು: ಸಿದ್ದರಾಮಯ್ಯ ಅವರ ರಾಜೀನಾಮೆ ಹಿನ್ನೆಲೆಯಲ್ಲಿ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಇಂದು ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಸಂಜೆ 4:05ಕ್ಕೆ ಲೋಕಭವನದಲ್ಲಿ ಪದಗ್ರಹಣ ಕಾರ್ಯಕ್ರಮ ನೆಡೆಯಲಿದ್ದು, ಡಿ.ಕೆ.ಶಿವಕುಮಾರ್ ಜೊತೆಗೆ 13 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಸಿದ್ದರಾಮಯ್ಯ ಸಂಪುಟದಲ್ಲಿದ್ದ ಬಹುತೇಕ ಹಿರಿಯ ಸಚಿವರಿಗೆ ಡಿ.ಕೆ.ಶಿವಕುಮಾರ್ ಮಂತ್ರಿ ಮಂಡಲದಲ್ಲಿಯೂ ಸ್ಥಾನ ನೀಡಲಾಗಿದೆ. ಸ್ವತಃ ಡಿ.ಕೆ.ಶಿವಕುಮಾರ್ ಅವರೇ ಕರೆ ಮಾಡಿ ಸಂಜೆ ಪ್ರಮಾಣವಚನ ಸ್ವೀಕಾರಕ್ಕೆ ಬರುವಂತೆ ಆಹ್ವಾನಿಸಿದ್ದಾರೆ. 13 ಶಾಸಕರು ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಯತೀಂದ್ರ ಸಿದ್ದರಾಮ್ಯ
ಡಾ.ಜಿ.ಪರಮೇಶ್ವರ್
ಕೆ.ಹೆಚ್.ಮುನಿಯಪ್ಪ
ಕೆ.ಜೆ.ಜಾರ್ಜ್,ಕೃಷ್ಣಬೈರೇಗೌಡ,
ಎಂ.ಬಿ.ಪಾಟೀಲ್,
ಪ್ರಿಯಾಂಕ್ ಖರ್ಗೆ
ರಾಮಲಿಂಗಾರೆಡ್ಡಿ
ದಿನೇಶ್ ಗುಂಡೂರಾವ್
ಭೈರತಿ ಸುರೇಶ್
ಹೆಚ್.ಕೆ.ಪಾಟೀಲ್ ಅಥವಾ ಈಶ್ವರ್ ಖಂಡ್ರೆ
ಶರಣಪ್ರಕಾಶ್ ಪಾಟೀಲ್
ಸತೀಶ್ ಜಾರಕಿಹೊಳಿ
ಯು.ಟಿ.ಖಾದರ್ ಸೇರಿದಂತೆ ಮೊದಲ ಹಂತದಲ್ಲಿ 13 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

