HomeKarnatakaಡಿ.ಕೆ.ಶಿವಕುಮಾರ್ ಪ್ರಮಾಣವಚನ: ನೆಲಮಂಗಲದಲ್ಲಿ ಸಂಭ್ರಮದ ವಾತಾವರಣ: ಶಾಸಕ ಶ್ರೀನಿವಾಸ್ ನೇತೃತ್ವದಲ್ಲಿ 90 ಸಾವಿರ ಮನೆಗಳಿಗೆ ಲಾಡು...

ಡಿ.ಕೆ.ಶಿವಕುಮಾರ್ ಪ್ರಮಾಣವಚನ: ನೆಲಮಂಗಲದಲ್ಲಿ ಸಂಭ್ರಮದ ವಾತಾವರಣ: ಶಾಸಕ ಶ್ರೀನಿವಾಸ್ ನೇತೃತ್ವದಲ್ಲಿ 90 ಸಾವಿರ ಮನೆಗಳಿಗೆ ಲಾಡು ಹಂಚಿಕೆ

ಬೆಂಗಳೂರು: ನಾಳೆ ಜೂನ್ 3ರಂದು ಡಿ.ಕೆ.ಶಿವಕುಮಾರ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಕೆಶಿ ಬಣದ ಕಾಂಗ್ರೆಸ್ ಶಾಸಕರು, ನಾಯಕರ ಕ್ಷೇತ್ರಗಳಲ್ಲಿ, ಮನೆಗಳಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿದೆ. ಡಿ.ಕೆ.ಶಿವಕುಮಾರ್ ಪ್ರಮಾಣವಚನದ ಐತಿಹಾಸಿಕ ಕ್ಷಣಕ್ಕೆ ಇಡ ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಕ್ಷೇತ್ರದ ಪ್ರತಿ ಹಳ್ಳಿ ಹಳ್ಳಿಗಳಲ್ಲಿ, ಮನೆ ಮನೆಗಳಲ್ಲಿ ಸಡಗರ- ಸಂಭ್ರಮ ಕಂಡುಬರುತ್ತಿದೆ. ಈ ಸಂತಸವನ್ನು ಇನ್ನಷ್ಟು ಹೆಚ್ಚಿಸಲು ಶಾಸಕ ಶ್ರೀನಿವಾಸ್ ನೇತೃತ್ವದಲ್ಲಿ ಭಾರಿ ಸಿದ್ಧತೆಗಳು ನಡೆದಿದ್ದು, 90 ಸಾವಿರ ಮನೆಗಲಿಗೆ ಲಾಡು ವಿತರಿಸಲಾಗುತ್ತಿದೆ.

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಸಂದರ್ಭ ಶಾಶ್ವತವಾಗಿ ನೆನಪಿನಲ್ಲಿರಬೇಕು ಎಂದು ನೆಲಮಂಗಲ ತಾಲೂಕಿನಾದ್ಯಂತ ಇರುವ ಸುಮಾರು 90 ಸಾವಿರ ಮನೆಗಳಿಗೆ ತಲಾ ಮುಕ್ಕಾಲು ಕೆಜಿಯಷ್ಟು (750 ಗ್ರಾಂ) ಉನ್ನತ ಗುಣಮಟ್ಟದ ಲಾಡುಗಳ ಸಿಹಿ ಬಾಕ್ಸ್ ಅನ್ನು ಉಚಿತವಾಗಿ ವಿತರಿಸಲು ಶಾಸಕರು ನಿರ್ಧರಿಸಿದ್ದಾರೆ. ನಾಳೆ ಬೆಳಗ್ಗೆಯಿಂದಲೇ ಈ ಬೃಹತ್ ಸಿಹಿ ಹಂಚಿಕೆ ಅಭಿಯಾನಕ್ಕೆ ಚಾಲನೆ ಸಿಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲಾಡು ವಿತರಣಾ ಕಾರ್ಯಕ್ರಮಕ್ಕಾಗಿ ನೆಲಮಂಗಲದಲ್ಲಿ ಬೃಹತ್ ಅಡುಗೆ ಶಾಲೆ ನಿರ್ಮಾಣವಾಗಿದ್ದು, ಸುಮಾರು 250 ರಿಂದ 300 ನುರಿತ ಬಾಣಸಿಗರು ಹಗಲಿರುಳು ಎನ್ನದೆ ಲಾಡು ತಯಾರಿಕೆಯಲ್ಲಿ ಶ್ರಮಿಸುತ್ತಿದ್ದಾರೆ. ಇಡೀ ಕ್ಷೇತ್ರಕ್ಕೆ ವಿತರಿಸಲು ಒಟ್ಟಾರೆ 9 ರಿಂದ 10 ಲಕ್ಷ ಲಾಡುಗಳ ಅಗತ್ಯವಿದ್ದು, ಸದ್ಯ ಭರದಲ್ಲಿ ಲಾಡು ತಯಾರಿಕೆ ನಡೆಯುತ್ತಿದೆ.

ಶಾಸಕ ಶ್ರೀನಿವಾಸ್ ನಿರ್ದೇಶನದಂತೆ ಕ್ಷೇತ್ರದ ಪ್ರಮುಖ ಮುಖಂಡರು ಹಾಗೂ ನೂರಾರು ಸಂಖ್ಯೆಯ ಉತ್ಸಾಹಿ ಕಾರ್ಯಕರ್ತರು ಪ್ರತಿ ಗ್ರಾಮದ ಮನೆ ಮನೆಗೆ ತೆರಳಿ ಲಾಡು ಬಾಕ್ಸ್ ಹಸ್ತಾಂತರಿಸಲಿದ್ದಾರೆ. ಕ್ಷೇತ್ರದ ಕೊನೆಯ ಮನೆಗೂ ಸಿಹಿ ತಲುಪುವವರೆಗೂ ಈ ವಿತರಣಾ ಕಾರ್ಯಕ್ರಮವು ನಿರಂತರವಾಗಿ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular