HomeLatest Newsಡಿಸಿಎಂ ಪರಮೇಶ್ವರ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಿಎಂ ಡಿ.ಕೆ. ಶಿವಕುಮಾರ್

ಡಿಸಿಎಂ ಪರಮೇಶ್ವರ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅನಾರೋಗ್ಯದಿಂದ ಬಳಲುತ್ತಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಪರಮೇಶ್ವರ ಅವರ ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.

ಸೋಂಕು ಜ್ವರದಿಂದ ಬಳಲುತ್ತಿರುವ ಡಾ. ಪರಮೇಶ್ವರ ಅವರು ಕಳೆದ ಒಂದು ವಾರದಿಂದ ವೈದ್ಯರ ಸಲಹೆಯಂತೆ ಮನೆಯಲ್ಲೇ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ತೆರಳಿದ ಮುಖ್ಯಮಂತ್ರಿ ಶಿವಕುಮಾರ್ ಅವರು ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ಪಡೆದು ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಈ ಸಂದರ್ಭದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಹ ಸಿಎಂ ಅವರೊಂದಿಗೆ ಉಪಸ್ಥಿತರಿದ್ದರು. ಪರಮೇಶ್ವರ ಅವರ ಚಿಕಿತ್ಸೆಯ ಪ್ರಗತಿ, ವೈದ್ಯರು ನೀಡಿರುವ ಸಲಹೆಗಳು ಹಾಗೂ ಆರೋಗ್ಯದ ಸ್ಥಿತಿಗತಿಗಳ ಕುರಿತು ನಾಯಕರು ಚರ್ಚೆ ನಡೆಸಿದರು ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಆಡಳಿತಾತ್ಮಕ ಮತ್ತು ರಾಜಕೀಯ ಬೆಳವಣಿಗೆಗಳ ನಡುವೆಯೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹಿರಿಯ ಸಹೋದ್ಯೋಗಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ವೈಯಕ್ತಿಕವಾಗಿ ಭೇಟಿ ನೀಡಿರುವುದು ಗಮನ ಸೆಳೆದಿದೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿರುವ ಡಾ. ಪರಮೇಶ್ವರ ಅವರು ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಮಸ್ಯೆಯಿಂದ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದನ್ನು ತಾತ್ಕಾಲಿಕವಾಗಿ ಕಡಿಮೆಗೊಳಿಸಿದ್ದರು.

ಡಾ. ಪರಮೇಶ್ವರ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತಿದ್ದು, ವೈದ್ಯರ ಸಲಹೆಯಂತೆ ಇನ್ನೂ ಕೆಲ ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular