HomeKarnatakaBIG NEWS: ಕೊಂಚ ಸಮಾಧಾನಕರ ಸುದ್ದಿ; ಮತ್ತೆ ಮಳೆ ಮುನ್ಸೂಚನೆ ಸಿಕ್ಕಿದೆ; ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ

BIG NEWS: ಕೊಂಚ ಸಮಾಧಾನಕರ ಸುದ್ದಿ; ಮತ್ತೆ ಮಳೆ ಮುನ್ಸೂಚನೆ ಸಿಕ್ಕಿದೆ; ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ

ಬೆಂಗಳೂರು: ಬರದಿಂದ ಕಂಗೆಟ್ಟಿದ್ದ ರಾಜ್ಯದ ರೈತರಿಗೆ ಹಾಗೂ ಜನತೆಗೆ ಕೊಂಚ ಸಮಾಧಾನಕರ ಸುದ್ದಿ. ರಾಜ್ಯದಲ್ಲಿ ಮತ್ತೆ ಮಳೆಯ ಮುನ್ಸೂಚನೆ ಸಿಕ್ಕಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಮತ್ತೆ ಮಳೆಯಾಗಲಿದೆ. ಮಳೆ ಆರಂಭದ ಹೊತ್ತಿಗೆ ಎಲ್ಲಾ ಕಾಮಗಾರಿಗಳು ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶೇ.50ರಷ್ಟು ಬಿಲ್ ಬಿಡುಗಡೆ ಮಾಡಿದ್ದೇವೆ. 432 ಕೋಟಿ ಬಿಬಿಎಂಪಿ ಕಾಮಗಾರಿ ಬಿಲ್ ಬಿಡುಗಡೆ ಮಾಡುತ್ತೇವೆ. ಕಾಮಗಾರಿ ಬೇಗ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದೇನೆ ಎಂದರು.

ಅಕ್ಟೋಬರ್ 7ರಂದು ಟ್ರಾಫಿಕ್ ಕಂಟ್ರ‍ೋಲ್ ಕುರಿತು ಸಭೆ ಮಾಡುತ್ತೇವೆ. ಬೆಂಗಳೂರಿನ ಎಲ್ಲಾ ಕಡೆ ಟ್ರಾಫಿಕ್ ಕಂಟ್ರೋಲ್ ಮಾಡುವುದು ಅಸಾಧ್ಯ. ರಸ್ತೆ ಗುಂಡಿಗಳನ್ನು ಮುಚ್ಚುವ ಬಗ್ಗೆ ಪಾಲಿಕೆ ಕ್ರಮ ತೆಗೆದುಕೊಳ್ಳಬೇಕಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular