ಬೆಂಗಳೂರು: ನಗರಾಭಿವೃದ್ಧಿ ಖಾತೆ ಸಿಗದಿದ್ದಕ್ಕೆ ಅಸಮಾಧಾನಗೊಂಡು ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬೆನ್ನಲ್ಲೇ ರಾಮಲಿಂಗಾರೆಡ್ಡಿ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಿಡಿದೆದ್ದು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.
ರಾಮಲಿಂಗಾರೆಡ್ಡಿ ರಾಜೀನಾಮೆ ಹಿನ್ನೆಲೆಯಲ್ಲಿ ಪಕ್ಷದ ವಿರುದ್ಧ ಬೇಸತ್ತು ರಾಮಲಿಂಗಾ ರೆಡ್ಡಿ ಬೆಂಬಲಿಗರು ಹಾಗೂ ಹಲವು ಕಾರ್ಯಕರ್ತರು ಕಾಂಗ್ರೆಸ್ ಗೆ ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದು, ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ್ದಾರೆ. ಬಳಿಕ ರಾಜೀನಾಮೆ ಪತ್ರವನ್ನು ಪಕ್ಷದ ರಾಅಜ್ಯಾಧ್ಯಕ್ಷರು ಹಾಗೂ ಎಐಸಿಸಿ ಅಧ್ಯಕ್ಷರಿಗೆ ರವಾನಿಸಿದ್ದಾರೆ. ಈ ಎಲ್ಲಾ ಬೆಳವಣಿಗೆ ಬಗ್ಗೆ ಮುಖ್ಯಮಂತ್ರಿ ಡಿಲ್.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ರಾಮಲಿಂಗಾ ರೆಡ್ಡಿ ಅವರು ಪ್ರಮುಖ ನಾಯಕರು ಹಾಗೂ ನನಗೆ ಬಹಳ ಆತ್ಮೀಯರಾಗಿದ್ದು, ಅವರೊಂದಿಗೆ ನಾನು ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.
ರಾಮಲಿಂಗಾ ರೆಡ್ಡಿ ಅವರು ಗ್ರಾಮೀಣ ಭಾಗದಿಂದ ಬಂದವರಲ್ಲ. ಅವರಿಗೆ ಜಲಸಂಪನ್ಮೂಲ ಸಚಿವಾಲಯ ಸಿಕ್ಕಿದ್ದು, ಅವರು ನಗರ ಪ್ರದೇಶದಲ್ಲಿ ಕೆಲಸ ಮಾಡಲು ಬಯಸಿದ್ದಾರೆ. ಹಾಗಾಗಿ ಅವರೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸುತ್ತೇನೆ ಎಂದು ತಿಳಿಸಿದರು.
ಕೆಲವು ಕಾರ್ಯಕರ್ತರು ರಾಜಿನಾಮೆ ನೀಡುತ್ತಿರುವ ವಿಚಾರದ ಬಗ್ಗೆ ಏನೇ ಇದ್ದರು ಶಿಸ್ತು ಬಹಳ ಮುಖ್ಯ. ಯಾರೂ ಕೂಡ ಪಕ್ಷದ ಶಿಸ್ತನ್ನು ಮೀರಬಾರದು ಎಂದು ಹೇಳಿದರು.

