HomeKarnatakaಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಯಾವಾಗ ಏನು ಆಗಬೇಕೋ ಅದು ಆಗುತ್ತದೆ. ಇನ್ನು ಮುಂದೆ ರಾಜಕೀಯ ವಿಚಾರವಾಗಿ ನಾನು ಮಾಧ್ಯಮಗಳ ಮುಂದೆ ಮಾತನಾಡುವುದಿಲ್ಲ. ಸಮಯ ಬಂದಾಗ ತಾನಾಗಿಯೇ ಗೊತ್ತಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ದೆಹಲಿ ಪ್ರವಾಸದ ಬಗ್ಗೆ ಕೇಳಿದಾಗ, ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ. ಯಾವ ರಾಜಕೀಯವೂ ಇಲ್ಲ. ಏನೇನೂ ತೀರ್ಮಾನ ಆಗಿವೆಯೋ ಅವು ಚಾಲ್ತಿಗೆ ಬರಲಿವೆ ಎಂದು ಸ್ಪಷ್ಟಪಡಿಸಿದರು.

ಪಕ್ಷದಲ್ಲಿ ಗೊಂದಲಗಳು ಇವೆ ಎಂಬ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಬಗ್ಗೆ ನಮ್ಮ ಪಾರ್ಟಿಯಲ್ಲಿ ಯಾವ ಸಮಯದಲ್ಲಿ ಏನು ಮಾಡಬೇಕೋ ಅದನ್ನು ಪಕ್ಷ ಮಾಡುತ್ತದೆ. ನಮಗೆ ನಮ್ಮ ಪಕ್ಷದ ಮೇಲೆ ವಿಶ್ವಾಸ ಇದೆ. ಏನು ಮಾಡಬೇಕು ಎಂಬುದು ಅವರಿಗೆ ಗೊತ್ತಿದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಯಕತ್ವ ಬದಲಾವಣೆ ವಿಚಾರವಾಗಿ ಮಾಧ್ಯಮಗಳಿಗೆ ಗೊಂದಲ ಇರಬಹುದು. ನಾನು ಈ ಬಗ್ಗೆ ಯಾವತ್ತು ಚರ್ಚೆ ಮಾಡಲ್ಲ. ಹೈಕಮಾಂಡ್ ಯಾವಾಗ ಯಾವ ಸೂಚನೆ ನೀಡುತ್ತದೆಯೋ ಆವಾಗ ಅದನ್ನು ಪಾಲಿಸುತ್ತೇವೆ ಎಂದು ನಾನು ಹಾಗೂ ಸಿಎಂ ಅವರು ಹೇಳಿದ್ದು, ಅದರಂತೆ ನಡೆಯುತ್ತೇವೆ ಎಂದು ತಿಳಿಸಿದರು.

ಒಳಮೀಸಲಾತಿ ವಿಚಾರವಾಗಿ ಬಿಜೆಪಿಯವರ ಕೈಯಲ್ಲಿ ಏನೂ ಮಾಡಲು ಆಗಿಲ್ಲ. ನಾವೇನು ಮಾತು ಕೊಟ್ಟಿದೆವೋ ಆ ಮಾತಿನ ಪ್ರಕಾರ ನಡೆದಿದ್ದೇವೆ. ಹಿಂದೆ 17% ಇದ್ದಾಗಲೂ ಕೂಡ ನಾವು ಸರಿಯಾಗಿಯೇ ಮಾಡಿದ್ದೆವು. ಈಗಲೂ ಕೂಡ ಬಹಳ ಸರಳವಾಗಿ ಮಾಡಿದ್ದೇವೆ. ಬಲ ಹಾಗೂ ಎಡ ಪಂಗಡಗಳಲ್ಲಿ ಮೊದಲು ಯಾರಿಗೆ, ನಂತರ ಯಾರಿಗೆ ಎಂಬ ಪ್ರಶ್ನೆ ಇತ್ತು. ಅದಕ್ಕೆ ಬೇಕಾದ ಪರಿಹಾರ ದಾರಿ ಕಂಡು ಹಿಡಿಯಲಾಗಿದೆ. ಬಲವಿರಲಿ, ಎಡವಿರಲಿ, ಲಂಬಾಣಿ ಇರಲಿ, ಬೋವಿ ಇರಲಿ ಎಲ್ಲರಿಗೂ ನ್ಯಾಯ ಒದಗಿಸುವ ಕೆಲಸವನ್ನು ನಮ್ಮ ಸರಕಾರ ಮಾಡಿದೆ. 30- 40 ವರ್ಷಗಳಿಂದ ಇದ್ದಂತಹ ಸಮಸ್ಯೆಯನ್ನು ನಾವು ಈಡೇರಿಸಿದ್ದೇವೆ. ಎಲ್ಲರಿಗೂ ನ್ಯಾಯ ಕೊಡುತ್ತಿದ್ದೇವೆ ಎಲ್ಲರೂ ಒಟ್ಟಾಗಿ ಹೋಗಬೇಕು ಅಷ್ಟೇ ಎಂದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸದಿದ್ದರೆ ಕಂಟೆಂಪ್ಟ್ ಮೂವ್ ಮಾಡುತ್ತೇವೆ ಎಂಬ ಎ.ಪಿ. ರಂಗನಾಥ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಮೊದಲು ಮಾಡಲಿ ಯಾರು ಬೇಡ ಅಂತಿದ್ದಾರೆ? ನಾವೇನು ಚುನಾವಣೆ ಮಾಡೋದಿಲ್ಲ ಅಂತ ಹೇಳಿದ್ದೇವಾ? ಕಾರ್ಪೊರೇಷನ್ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ನಾವು ಸಿದ್ಧರಿದ್ದೇವೆ ಎಂದು ಸ್ಪಷ್ಟಪಡಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular