HomeLatest NewsBIG NEWS: ಬಿಜೆಪಿಯವರನ್ನು ಹೆಗಲ ಮೇಲೆ ಕೂರಿಸಿಕೊಂಡು ಮೆರವಣಿಗೆ ಮಾಡೋಣ: ತಮ್ಮ ಅಸ್ತಿತ್ವ ತೋರಿಸಿಕೊಳ್ಳಲು ಸರ್ಕಸ್...

BIG NEWS: ಬಿಜೆಪಿಯವರನ್ನು ಹೆಗಲ ಮೇಲೆ ಕೂರಿಸಿಕೊಂಡು ಮೆರವಣಿಗೆ ಮಾಡೋಣ: ತಮ್ಮ ಅಸ್ತಿತ್ವ ತೋರಿಸಿಕೊಳ್ಳಲು ಸರ್ಕಸ್ ಮಾಡ್ತಿದ್ದಾರೆ: ಡಿಸಿಎಂ ವಾಗ್ದಾಳಿ

ಬೆಂಗಳೂರು: ಕಾಲ್ತುಳಿತ ಪ್ರಕರಣದಲ್ಲಿ ನಮ್ಮನ್ನು ಟೀಕೆ ಮಾಡುತ್ತಿರುವ ಬಿಜೆಪಿಯವರನ್ನು ಹೆಗಲ ಮೇಲೆ ಕೂರಿಸಿಕೊಂಡು ಮೆರವಣಿಗೆ ಮಾಡೋಣ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದ ಹೊಣೆಯನ್ನು ಮುಖ್ಯಮಂತ್ರಿಗಳು ಹಾಗೂ ಡಿಸಿಎಂ ಹೊರಬೇಕು ಎಂದು ಬಿಜೆಪಿ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ಅನೇಕ ರೈಲ್ವೇ ನಿಲ್ದಾಣಗಳಲ್ಲಿ ಕಾಲ್ತುಳಿತ, ಉತ್ತರ ಪ್ರದೇಶದ ದೇವಸ್ಥಾನವೊಂದರಲ್ಲಿ ನೂರಾರು ಜನ ಕಾಲ್ತುಳಿತಕ್ಕೆ ಒಳಗಾಗಿ ಸತ್ತರು. ಇದಕ್ಕೆಲ್ಲಾ ಯಾರು ಹೊಣೆ? ಎರಡು ದಿನದ ಹಿಂದೆ ನಾನು ಅಹಮದಾಬಾದ್ ಗೆ ಹೋಗಿದ್ದೆ. ನಾನೇನಾದರು ಆ ಘಟನೆ ಬಗ್ಗೆ ಕೇಂದ್ರ ಸರ್ಕಾರವನ್ನು ಗುರಿ ಮಾಡಿ ಮಾತನಾಡಿದ್ದೇನೆಯೇ? ಎಂದು ಕೇಳಿದರು.

ಅವರು ಇರುವುದೇ ಹೆಣದ ಮೇಲೆ ರಾಜಕೀಯ ಮಾಡಲು. ಅವರು ಎಲ್ಲಾ ಕಾಲದಿಂದಲೂ ಅದೇ ಕೆಲಸ ಮಾಡುತ್ತಿದ್ದಾರೆ. ಬಂದ್ ವೇಳೆಯಲ್ಲಿ, ಗಂಗಾಧರ್ ಕೊಲೆ ಪ್ರಕರಣ ಸೇರಿದಂತೆ ಬೇಕಾದಷ್ಟು ಸಮಯದಲ್ಲಿ ಇದೇ ರೀತಿ ಮಾಡಿದ್ದಾರೆ ಎಂದು ತಿರುಗೇಟು ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಲ್ತುಳಿತ ಪ್ರಕರಣದಲ್ಲಿ ಯಾರ್ಯಾರಿಗೆ ಶಿಕ್ಷೆ ಕೊಡಬೇಕೋ ಆ ಕೆಲಸವನ್ನು ಸರ್ಕಾರ ಮಾಡಿದೆ. ತನಿಖೆಗಾಗಿ ಏಕ ಸದಸ್ಯ ಆಯೋಗವನ್ನು ಸಹ ನೇಮಕ ಮಾಡಲಾಗಿದೆ. ಇಡೀ ದೇಶದಲ್ಲಿ ನೂರಾರು ಘಟನೆಗಳು ನಡೆದಿವೆ. ಆದರೂ ಕಾಂಗ್ರೆಸ್ ಪಕ್ಷ ಎಂದಿಗೂ ಹೆಣದ ಮೇಲೆ ರಾಜಕೀಯ ಮಾಡಿಲ್ಲ ಎಂದರು.

ಅವರ ರಾಜಕೀಯ ತಳಹದಿ ಹಾಳಾಗಿರುವ ಕಾರಣಕ್ಕೆ ಈ ರೀತಿಯ ಆಪಾದನೆಗಳನ್ನು ಮಾಡುತ್ತಿದ್ದಾರೆ. ತಮ್ಮ ಅಸ್ತಿತ್ವ ಇನ್ನೂ ಇದೇ ಎಂದು ತೋರಿಸಿಕೊಳ್ಳಲು ಸರ್ಕಸ್ ಮಾಡುತ್ತಿದ್ದಾರೆ. ಜನ ಸಾಮಾನ್ಯರು ಅವರ ಜೊತೆಯಿಲ್ಲ ಎಂದು ಲೇವಡಿ ಮಾಡಿದರು.

For Latest News Updates, Join Our Whatsapp Community🚩
RELATED ARTICLES

Most Popular