HomeKarnatakaBIG NEWS: ಬಿಜೆಪಿಯವರಿಗೆ ಜನರ ಸಮಸ್ಯೆ, ರಾಜ್ಯದ ಅಭಿವೃದ್ಧಿಗಿಂತ ರಾಜಕಾರಣವೇ ಮುಖ್ಯ; ಅವರು ಹಾಗೆಯೇ ಇರಲಿ...

BIG NEWS: ಬಿಜೆಪಿಯವರಿಗೆ ಜನರ ಸಮಸ್ಯೆ, ರಾಜ್ಯದ ಅಭಿವೃದ್ಧಿಗಿಂತ ರಾಜಕಾರಣವೇ ಮುಖ್ಯ; ಅವರು ಹಾಗೆಯೇ ಇರಲಿ ಎಂದ ಡಿಸಿಎಂ

ಬೆಳಗಾವಿ: ಬಿಜೆಪಿ ನಾಯಕರಿಗೆ ಕೇವಲ ರಾಜಕಾರಣ ಮಾತ್ರ ಬೇಕು. ಅವರು ರಾಜಕಾರಣ ಮಾಡಿಕೊಂಡಿರಲಿ, ಜನರ ಸಮಸ್ಯೆ, ರಾಜ್ಯದ ಅಭಿವೃದ್ಧಿ ಬಗ್ಗೆ ಅವರಿಗೆ ಆಸಕ್ತಿ ಇಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿ ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ವಿಪಕ್ಷದವರಿಗೆ ಜನರ ಸಮಸ್ಯೆ ಬಗ್ಗೆ ಎಷ್ಟು ಕಾಳಜಿ ಇದೆ ಎಂಬುದು ಮುಖ್ಯ. ಆದರೆ ಬಿಜೆಪಿಯವರಿಗೆ ಈ ಬಗ್ಗೆ ಚರ್ಚೆ ಮಾಡಲು ಯಾವುದೇ ಆಸಕ್ತಿ ಇಲ್ಲ. ಚರ್ಚೆಗೆ ಸಿದ್ಧರಿಲ್ಲ ಎಂದರೆ ನಾವೇನು ಮಾಡಲು ಸಾಧ್ಯ? ಬಿಜೆಪಿಯವರು ರಾಜಕಾರಣ ಮಾಡಿಕೊಂಡಿರಲಿ. ನಾವು ರಾಜ್ಯದ ಅಭಿವೃದ್ಧಿಯತ್ತ ಗಮನ ಹರಿಸುತ್ತೇವೆ ಎಂದರು.

ತಾವು ಕರೆದ ಭೋಜನಕೂಟದಲ್ಲಿ ಬಿಜೆಪಿ ಶಾಸಕರು ಭಾಗಿ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಸಿಎಂ, ಮದುವೆ, ಶುಭ ಸಮಾರಂಭ, ಭೋಜನ ಕೂಟದಲ್ಲಿ ನಾಯಕರು ಪಕ್ಷಾತೀತವಾಗಿ ಸೇರುತ್ತಾರೆ. ಅದರಲ್ಲಿ ತಪ್ಪೇನಿದೆ? ಬಿಜೆಪಿಯವರು ನನ್ನ ಜೊತೆ ಮಾತನಾಡುವುದು, ನಮ್ಮ ಪಕ್ಷದ ನಾಯಕರು ಅವರ ಜೊತೆ ಮಾತನಾಡುವುದು ಸಹಜ. ರಾಜಕೀಯವಾಗಿ ಏನೇ ಭಿನ್ನಾಭಿಪ್ರಾಯವಿದ್ದರೂ ಮನುಷ್ಯರ ನಡುವೆ ಬಾಂಧವ್ಯ ಮುಖ್ಯ. ಭೋಜನ ಕೂಟಕ್ಕೆ ಎಲ್ಲಾ ಶಾಸಕರನ್ನು ಆಹ್ವಾನಿಸುತ್ತೇವೆ. ಕೆಲವರು ಬರುತ್ತಾರೆ, ಕೆಲವರು ನಿರಾಕರಿಸುತ್ತಾರೆ. ನಮಗೆ ಆತ್ಮೀಯರಾಗಿರುವವರನ್ನು ನಾವು ಕರೆಯುತ್ತೇವೆ. ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular