HomeKarnatakaBIG NEWS: ಯಾರಿಗೆ ಏನು ಉತ್ತರ ಕೊಡಬೇಕು ಕೊಡುತ್ತೇವೆ; ವಿಪಕ್ಷಗಳಿಗೆ ಡಿಸಿಎಂ ತಿರುಗೇಟು

BIG NEWS: ಯಾರಿಗೆ ಏನು ಉತ್ತರ ಕೊಡಬೇಕು ಕೊಡುತ್ತೇವೆ; ವಿಪಕ್ಷಗಳಿಗೆ ಡಿಸಿಎಂ ತಿರುಗೇಟು

ಬೆಂಗಳೂರು: ಪಂಚರಾಜ್ಯ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಸರ್ಕಾರಕ್ಕೆ 1000 ಕೋಟಿ ಟಾರ್ಗೆಟ್ ನೀಡಿದೆ. ಕಾಂಗ್ರೆಸ್ ನಾಯಕರು ಹಣ ಲೂಟಿ ಮಾಡುತ್ತಿದ್ದಾರೆ ಎಂಬ ಬಿಜೆಪಿ ಹಾಗೂ ಜೆಡಿಎಸ್ ಆರೋಪಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಯಾರಿಗೆ ಏನು ಉತ್ತರ ಕೊಡಬೇಕು ಕೊಡುತ್ತೇವೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೈ ವೋಲ್ಟೇಜ್ ಗೂ ಉತ್ತರ ಕೊಡುತ್ತೇವೆ, ಲೋ ವೋಲ್ಟೇಜ್ ಗೂ ಕೊಡುತ್ತೇವೆ. ನಕಲಿಗೂ ಉತ್ತರಿಸುತ್ತೇವೆ. ಲೂಟಿಗೂ ಉತ್ತರ ಕೊಡುತ್ತೇವೆ. ಎಲ್ಲಾ ವಿಚಾರಗಳ ಬಗ್ಗೆಯೂ ಬಿಚ್ಚಿಡುತ್ತೇವೆ ಎಂದು ಟಾಂಗ್ ನೀಡಿದ್ದಾರೆ.

ಬಿಜೆಪಿಯವರು ಪ್ರತಿಭಟನೆ ಮಾಡಲಿ. ಲೂಟಿಕೋರರು ಪ್ರತಿಭಟಿಸಲಿ. ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular